Featured

ಕಾಸರಗೋಡು : ಆ್ಯಸಿಡ್ ಸೇವಿಸಿ ಒಂದೇ ಕುಟುಂಬದ ಮೂವರು ಮೃತ್ಯು ; ಇನ್ನೋರ್ವ ಗಂಭೀರ – vishwanews24

ಕಾಸರಗೋಡು : ಆ್ಯಸಿಡ್ ಸೇವಿಸಿ ಒಂದೇ ಕುಟುಂಬದ ಮೂವರು ಮೃತ್ಯು ; ಇನ್ನೋರ್ವ ಗಂಭೀರ

ಕಾಸರಗೋಡು : ಆ್ಯಸಿಡ್ ಸೇವಿಸಿ ಒಂದೇ ಕುಟುಂಬದ ಮೂವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಅಂಬಲತ್ತರ ಸಮೀಪದ ಪಾರಕ್ಕಾಯಿ ಎಂಬಲ್ಲಿ ನಡೆದಿದೆ. ಗೋಪಿ (58) , ಪತ್ನಿ ಇಂದಿರಾ (54) ,ಪುತ್ರ ರಂಜೇಶ್ (34) ಮೃತಪಟ್ಟವರು. ಇನ್ನೋರ್ವ ಪುತ್ರ ರಾಕೇಶ್ (27) ಗಂಭೀರ ಸ್ಥಿತಿಯಲ್ಲಿ ಕಣ್ಣೂರು ಸರಕಾರಿ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆರ್ಥಿಕ ಮುಗ್ಗಟ್ಟು ಕೃತ್ಯಕ್ಕೆ ಕಾರಣ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಮುಂಜಾನೆ.ಮೂರು ಗಂಟೆ ಸುಮಾರಿಗೆ ಕೃತ್ಯ ಬೆಳಕಿಗೆ ಬಂದಿದೆ. ಸಂಬಂಧಿಕರೋರ್ವರ ಮೊಬೈಲ್‌ಗೆ ಕರೆ ಬಂದಿದ್ದು, ತಮ್ಮನ್ನು ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಎಂದು ತಿಳಿಸಿದ್ದನೆನ್ನಲಾಗಿದೆ.

ಸಂಬಂಧಿಕರು ಹಾಗೂ ನಾಗರಿಕರು ತಲುಪಿ ಆಸ್ಪತ್ರೆಗೆ ತಲಪಿಸಿದರೂ ಮೂವರೂ ಮೃತಪಟ್ಟಿದ್ದರು. ರಂಜೇಶ್ ಹಾಗೂ ರಾಕೇಶ್ ಈ ಹಿಂದೆ ದುಬೈಯಲ್ಲಿ ದ್ದರು. ಎರಡು ವರ್ಷಗಳ ಹಿಂದೆ ಊರಿಗೆ ಮರಳಿದ್ದು, ಉದ್ಯಮ ನಡೆಸುತ್ತಿದ್ದರು. ಇದು ಯಶಸ್ವಿಯಾಗಲಿಲ್ಲ. ಇದರಿಂದ ಸಾಲದ ಹೊರೆ ಹೆಚ್ಚಿತ್ತು ಎನ್ನಲಾಗಿದೆ.ಉದ್ಯಮ ನಿಲ್ಲಿಸಿ ಕೂಲಿ ಕೆಲಸಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ದಿನಗಳ ಹಿಂದೆ ಇವರು ಸಂಬಂಧಿಕರ ಮನೆಗಳಿಗೆ ಹಾಗೂ ಕ್ಷೇತ್ರ ದರ್ಶನಕ್ಕೆ ತೆರಳಿದ್ದರು. ಅಂಬಲತ್ತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

12 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

12 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

13 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

13 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

15 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

15 hours ago