ಕಾಸರಗೋಡು : ಆ್ಯಸಿಡ್ ಸೇವಿಸಿ ಒಂದೇ ಕುಟುಂಬದ ಮೂವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಅಂಬಲತ್ತರ ಸಮೀಪದ ಪಾರಕ್ಕಾಯಿ ಎಂಬಲ್ಲಿ ನಡೆದಿದೆ. ಗೋಪಿ (58) , ಪತ್ನಿ ಇಂದಿರಾ (54) ,ಪುತ್ರ ರಂಜೇಶ್ (34) ಮೃತಪಟ್ಟವರು. ಇನ್ನೋರ್ವ ಪುತ್ರ ರಾಕೇಶ್ (27) ಗಂಭೀರ ಸ್ಥಿತಿಯಲ್ಲಿ ಕಣ್ಣೂರು ಸರಕಾರಿ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆರ್ಥಿಕ ಮುಗ್ಗಟ್ಟು ಕೃತ್ಯಕ್ಕೆ ಕಾರಣ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಮುಂಜಾನೆ.ಮೂರು ಗಂಟೆ ಸುಮಾರಿಗೆ ಕೃತ್ಯ ಬೆಳಕಿಗೆ ಬಂದಿದೆ. ಸಂಬಂಧಿಕರೋರ್ವರ ಮೊಬೈಲ್‌ಗೆ ಕರೆ ಬಂದಿದ್ದು, ತಮ್ಮನ್ನು ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಎಂದು ತಿಳಿಸಿದ್ದನೆನ್ನಲಾಗಿದೆ.
ಸಂಬಂಧಿಕರು ಹಾಗೂ ನಾಗರಿಕರು ತಲುಪಿ ಆಸ್ಪತ್ರೆಗೆ ತಲಪಿಸಿದರೂ ಮೂವರೂ ಮೃತಪಟ್ಟಿದ್ದರು. ರಂಜೇಶ್ ಹಾಗೂ ರಾಕೇಶ್ ಈ ಹಿಂದೆ ದುಬೈಯಲ್ಲಿ ದ್ದರು. ಎರಡು ವರ್ಷಗಳ ಹಿಂದೆ ಊರಿಗೆ ಮರಳಿದ್ದು, ಉದ್ಯಮ ನಡೆಸುತ್ತಿದ್ದರು. ಇದು ಯಶಸ್ವಿಯಾಗಲಿಲ್ಲ. ಇದರಿಂದ ಸಾಲದ ಹೊರೆ ಹೆಚ್ಚಿತ್ತು ಎನ್ನಲಾಗಿದೆ.ಉದ್ಯಮ ನಿಲ್ಲಿಸಿ ಕೂಲಿ ಕೆಲಸಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ದಿನಗಳ ಹಿಂದೆ ಇವರು ಸಂಬಂಧಿಕರ ಮನೆಗಳಿಗೆ ಹಾಗೂ ಕ್ಷೇತ್ರ ದರ್ಶನಕ್ಕೆ ತೆರಳಿದ್ದರು. ಅಂಬಲತ್ತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…