ಕಾಸರಗೋಡು : ಮದುವೆಯಾದ ಕೇವಲ ಒಂದೂವರೆ ತಿಂಗಳಲ್ಲೇ ನವವಿವಾಹಿತೆಯೊಬ್ಬರು ಇಲಿ ಪಾಷಾಣ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಅಶ್ವತಿ ಪಿ.ವಿ. (24) ಮೃತಪಟ್ಟ ದುರ್ದೈವಿ. ಕಾಸರಗೋಡು ಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಕುಟ್ಟಿಕ್ಕೋಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೇತೂರುಪಾರದ ವಟ್ಟಂತಟ್ಟ ನಿವಾಸಿಯಾದ ಪುಷ್ಪಾ ಮತ್ತು ದಿವಂಗತ ಸುಕು ದಂಪತಿಯ ಪುತ್ರಿ ಅಶ್ವತಿ, ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಇವರಿಗೆ ಕಳೆದ ಏಪ್ರಿಲ್ 5 ರಂದು ಕೊಡೋಂ-ಬೇಲೂರು ಗ್ರಾಮ ಪಂಚಾಯತ್‌ನ ಪರಕ್ಕಲೈ ಬಳಿಯ ಚೀತಕ್ಕಾವು ಮೂಲದ ಹತ್ತಿರದ ಸಂಬಂಧಿ ರೂಪೇಶ್ ಎಂಬುವವರೊಂದಿಗೆ ವಿವಾಹವಾಗಿತ್ತು. ಮದುವೆಯಾಗಿ ಅತ್ಯಂತ ಸಂತೋಷದಿಂದ ಇರಬೇಕಾಗಿದ್ದ ಯುವತಿ, ಮೇ 18 ರಂದು ಕಾಸರಗೋಡು ಪಟ್ಟಣದ ಮನೆಯಲ್ಲಿ ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.
ಇದನ್ನೂ ಓದಿ:
ವಿಷ ಸೇವಿಸಿ ಅಶ್ವತಿ ಅವರ ಆರೋಗ್ಯ ಸ್ಥಿತಿ ತೀವ್ರ ಹದಗೆಟ್ಟಿದ್ದರಿಂದ, ಅವರನ್ನು ತಕ್ಷಣವೇ ಪರಿಯಾರಂನಲ್ಲಿರುವ ಕಣ್ಣೂರು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆಸ್ಪತ್ರೆಯಲ್ಲಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಕೊನೆಯುಸಿರೆಳೆದಿದ್ದಾರೆ.
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…