Featured

ಕಾಸರಗೋಡು: ಕಾಂಗ್ರೆಸ್ ಕಾರ್ಯಕರ್ತರ ಹತ್ಯೆ ಪ್ರಕರಣ ; 14 ಆರೋಪಿಗಳು ದೋಷಿಗಳೆಂದು ತೀರ್ಪು ಪ್ರಕಟ – vishwanews24

ಕಾಸರಗೋಡು: ಕಾಂಗ್ರೆಸ್ ಕಾರ್ಯಕರ್ತರ ಹತ್ಯೆ ಪ್ರಕರಣ ; 14 ಆರೋಪಿಗಳು ದೋಷಿಗಳೆಂದು ತೀರ್ಪು ಪ್ರಕಟ

ಕಾಸರಗೋಡು: ಯುವ ಕಾಂಗ್ರೆಸ್ ಕಾರ್ಯಕರ್ತರಾದ ಪೆರಿಯ ಕಳ್ಳಿಯೊಟ್ ನ ಶರತ್ ಲಾಲ್(19) ಮತ್ತು ಕೃಪೇಶ್ (20) ಹತ್ಯೆ ಪ್ರಕರಣದಲ್ಲಿ 14 ಆರೋಪಿಗಳನ್ನು ಎರ್ನಾಕುಲಂ ಸಿಬಿಐ ಕೋರ್ಟ್ ದೋಷಿಗಳೆಂದು ತೀರ್ಪು ನೀಡಿದೆ.

ಮಾಜಿ ಶಾಸಕ ಕೆ.ವಿ.ಕುಂಞಿರಾಮನ್ ಸೇರಿದಂತೆ 14 ಆರೋಪಿಗಳು. ನ್ಯಾಯಾಲಯ 10 ಮಂದಿಯನ್ನು ಖುಲಾಸೆಗೊಳಿಸಿದೆ. 1 ರಿಂದ 10 ಆರೋಪಿಗಳ ಮೇಲೆ ಕೊಲೆ ಆರೋಪವಿದ್ದು, ಶಿಕ್ಷೆಗೊಳಗಾದ 14 ಮಂದಿಯಲ್ಲಿ ಹತ್ತು ಮಂದಿ ಪ್ರಮುಖ ಸಿಪಿಎಂ ನಾಯಕರು.

ಎ ಪೀತಾಂಬರನ್, ಸಿಪಿಎಂ ಪೆರಿಯ ಸ್ಥಳೀಯ ಸಮಿತಿಯ ಮಾಜಿ ಸದಸ್ಯ, ಸಾಜಿ ಸಿ. ಜಾರ್ಜ್, ಕೆ.ಎಂ. ಸುರೇಶ್, ಕೆ. ಅನಿಲ್ ಕುಮಾರ್, ಜಿಜಿನ್, ಆರ್. ಶ್ರೀರಾಗ್, ಎ. ಅಶ್ವಿನ್ ಮತ್ತು ಸುಬಿಶ್ ಕೊಲೆ ಆರೋಪಿಗಳು. ಒಂಬತ್ತನೇ ಪ್ರತಿವಾದಿ ಎ ಮುರಳಿ, ಟಿ ರಂಜಿತ್, ಕೆ. ಕಾಞಂಗಾಡ್ ಬ್ಲಾಕ್ ಪಂಚಾಯತ್ ಅಧ್ಯಕ್ಷ ಕೆ. ಮಣಿಕಂಠನ್, ಎ. ಸುರೇಂದ್ರನ್, ಉದುಮ ಮಾಜಿ ಶಾಸಕ ಕೆ.ವಿ. ಕುಂಞಿರಾಮನ್, ರಾಘವನ್ ವೆಲ್ತೋಳಿ ಮತ್ತು ಕೆ.ವಿ.ಭಾಸ್ಕರನ್ ಅವರನ್ನು ದೋಷಿ ಎಂದು ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ನ್ಯಾಯಾಲಯ 292 ಸಾಕ್ಷಿಗಳನ್ನು ವಿಚಾರಣೆ ನಡೆಸಿತ್ತು. ಫೆಬ್ರವರಿ 17, 2019 ರಂದು ಕೊಲೆ ನಡೆದಿತ್ತು. ಮೊದಲಿಗೆ ಸ್ಥಳೀಯ ಪೊಲೀಸರ ವಿಶೇಷ ತಂಡ ಹಾಗೂ ನಂತರ ಅಪರಾಧ ವಿಭಾಗದ ಪೊಲೀಸರು ಪ್ರಕರಣದ ತನಿಖೆ ನಡೆಸಿದ್ದರು.

ಶರತ್ ಲಾಲ್ ಮತ್ತು ಕೃಪೇಶ್ ಅವರ ಪೋಷಕರು ಹೈಕೋರ್ಟ್ ಮೆಟ್ಟಿಲೇರಿದಾಗ ಸಿಬಿಐ ತನಿಖೆಯನ್ನು ಕೈಗೆತ್ತಿಕೊಂಡಿತು. ತಿರುವನಂತಪುರ ಘಟಕದ ಡಿವೈಎಸ್‌ಪಿ ಅನಂತಕೃಷ್ಣನ್ ನೇತೃತ್ವದ ಸಿಬಿಐ ತಂಡ ತನಿಖೆ ನಡೆಸಿತು. ಫೆಬ್ರವರಿ 2023 ರಲ್ಲಿ ಸಿಬಿಐ ನ್ಯಾಯಾಲಯದಲ್ಲಿ ವಿಚಾರಣೆ ಆರಂಭಗೊಂಡಿತ್ತು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago