ಕಾಸರಗೋಡು: ಯುವ ಕಾಂಗ್ರೆಸ್ ಕಾರ್ಯಕರ್ತರಾದ ಪೆರಿಯ ಕಳ್ಳಿಯೊಟ್ ನ ಶರತ್ ಲಾಲ್(19) ಮತ್ತು ಕೃಪೇಶ್ (20) ಹತ್ಯೆ ಪ್ರಕರಣದಲ್ಲಿ 14 ಆರೋಪಿಗಳನ್ನು ಎರ್ನಾಕುಲಂ ಸಿಬಿಐ ಕೋರ್ಟ್ ದೋಷಿಗಳೆಂದು ತೀರ್ಪು ನೀಡಿದೆ.
ಮಾಜಿ ಶಾಸಕ ಕೆ.ವಿ.ಕುಂಞಿರಾಮನ್ ಸೇರಿದಂತೆ 14 ಆರೋಪಿಗಳು. ನ್ಯಾಯಾಲಯ 10 ಮಂದಿಯನ್ನು ಖುಲಾಸೆಗೊಳಿಸಿದೆ. 1 ರಿಂದ 10 ಆರೋಪಿಗಳ ಮೇಲೆ ಕೊಲೆ ಆರೋಪವಿದ್ದು, ಶಿಕ್ಷೆಗೊಳಗಾದ 14 ಮಂದಿಯಲ್ಲಿ ಹತ್ತು ಮಂದಿ ಪ್ರಮುಖ ಸಿಪಿಎಂ ನಾಯಕರು.
ಎ ಪೀತಾಂಬರನ್, ಸಿಪಿಎಂ ಪೆರಿಯ ಸ್ಥಳೀಯ ಸಮಿತಿಯ ಮಾಜಿ ಸದಸ್ಯ, ಸಾಜಿ ಸಿ. ಜಾರ್ಜ್, ಕೆ.ಎಂ. ಸುರೇಶ್, ಕೆ. ಅನಿಲ್ ಕುಮಾರ್, ಜಿಜಿನ್, ಆರ್. ಶ್ರೀರಾಗ್, ಎ. ಅಶ್ವಿನ್ ಮತ್ತು ಸುಬಿಶ್ ಕೊಲೆ ಆರೋಪಿಗಳು. ಒಂಬತ್ತನೇ ಪ್ರತಿವಾದಿ ಎ ಮುರಳಿ, ಟಿ ರಂಜಿತ್, ಕೆ. ಕಾಞಂಗಾಡ್ ಬ್ಲಾಕ್ ಪಂಚಾಯತ್ ಅಧ್ಯಕ್ಷ ಕೆ. ಮಣಿಕಂಠನ್, ಎ. ಸುರೇಂದ್ರನ್, ಉದುಮ ಮಾಜಿ ಶಾಸಕ ಕೆ.ವಿ. ಕುಂಞಿರಾಮನ್, ರಾಘವನ್ ವೆಲ್ತೋಳಿ ಮತ್ತು ಕೆ.ವಿ.ಭಾಸ್ಕರನ್ ಅವರನ್ನು ದೋಷಿ ಎಂದು ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ನ್ಯಾಯಾಲಯ 292 ಸಾಕ್ಷಿಗಳನ್ನು ವಿಚಾರಣೆ ನಡೆಸಿತ್ತು. ಫೆಬ್ರವರಿ 17, 2019 ರಂದು ಕೊಲೆ ನಡೆದಿತ್ತು. ಮೊದಲಿಗೆ ಸ್ಥಳೀಯ ಪೊಲೀಸರ ವಿಶೇಷ ತಂಡ ಹಾಗೂ ನಂತರ ಅಪರಾಧ ವಿಭಾಗದ ಪೊಲೀಸರು ಪ್ರಕರಣದ ತನಿಖೆ ನಡೆಸಿದ್ದರು.
ಶರತ್ ಲಾಲ್ ಮತ್ತು ಕೃಪೇಶ್ ಅವರ ಪೋಷಕರು ಹೈಕೋರ್ಟ್ ಮೆಟ್ಟಿಲೇರಿದಾಗ ಸಿಬಿಐ ತನಿಖೆಯನ್ನು ಕೈಗೆತ್ತಿಕೊಂಡಿತು. ತಿರುವನಂತಪುರ ಘಟಕದ ಡಿವೈಎಸ್‌ಪಿ ಅನಂತಕೃಷ್ಣನ್ ನೇತೃತ್ವದ ಸಿಬಿಐ ತಂಡ ತನಿಖೆ ನಡೆಸಿತು. ಫೆಬ್ರವರಿ 2023 ರಲ್ಲಿ ಸಿಬಿಐ ನ್ಯಾಯಾಲಯದಲ್ಲಿ ವಿಚಾರಣೆ ಆರಂಭಗೊಂಡಿತ್ತು.
ಪಾಸ್‌ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ ನವದೆಹಲಿ: 14 ವರ್ಷಗಳಲ್ಲಿ ಇದೇ ಮೊದಲ…
ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು ಬೆಳ್ತಂಗಡಿ: ತಾಲೂಕಿನ ಸುಲ್ಕೇರಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ…
ನನ್ನ ಮಗಳು ತಪ್ಪಿತಸ್ಥೆ ಎಂದು ಸಾಬೀತಾದರೆ ಅವಳನ್ನು ಗಲ್ಲಿಗೇರಿಸಿ : ಸಿಯಾ ಪೋಷಕರ ಆಕ್ರೋಶ ಮುಂಬೈ: ನನ್ನ ಮಗಳು ತಪ್ಪು…
ದರ್ಶನ್ ಪುತ್ರನಿದ್ದ ಕಾರು ಅಪಘಾತ : ವಿನೀಶ್ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…
ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ ಉಡುಪಿ : ರಾಷ್ಟ್ರೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ –…