ಕಾಸರಗೋಡು: ಕುಂದಾಪುರ ರೈಲ್ವೇ ಹಳಿಯಲ್ಲಿ ನಾಪತ್ತೆಯಾಗಿದ್ದ ವೈದ್ಯರ ಮೃತ ದೇಹ ಪತ್ತೆ – Vishwanews24

Featured, ಉಡುಪಿ

ಕಾಸರಗೋಡು: ಕುಂದಾಪುರ ರೈಲ್ವೇ ಹಳಿಯಲ್ಲಿ ನಾಪತ್ತೆಯಾಗಿದ್ದ ವೈದ್ಯರ ಮೃತ ದೇಹ ಪತ್ತೆ

ಕಾಸರಗೋಡು: ಬದಿಯಡ್ಕ ದಿಂದ ನಾಪತ್ತೆಯಾಗಿದ್ದ ವೈದ್ಯರ ಮೃತ ದೇಹ ಕುಂದಾಪುರ ಸಮೀಪ ರೈಲ್ವೆ ಹಳಿಯಲ್ಲಿ ಗುರುವಾರ ಸಂಜೆ ಪತ್ತೆಯಾಗಿದೆ.

ಬದಿಯಡ್ಕ ದ ದಂತ ವೈದ್ಯ ಡಾ. ಎಸ್. ಕೃಷ್ಣ ಮೂರ್ತಿ (57) ಮೃತ ಪಟ್ಟವರು.

ರೈಲ್ವೆ ಹಳಿಯಲ್ಲಿ ಮೃತ ದೇಹ ಪತ್ತೆಯಾದ ಬಗ್ಗೆ ಲಭಿಸಿದ ಮಾಹಿತಿಯಂತೆ ಕೃಷ್ಣ ಮೂರ್ತಿ ರವರ ಕುಟುಂಬಸ್ಥರು ಕುಂದಾಪುರಕ್ಕೆ ತೆರಳಿ ಗುರುತು ಪತ್ತೆ ಹಚ್ಚಿ ದ್ದಾರೆ.

ಮೃತ ದೇಹವನ್ನು ಮರಣೋತ್ತರ ಪರೀಕ್ಷೆ ಬಳಿಕ ಊರಿಗೆ ತರಲಾಗುವುದು. ನವಂಬರ್ ಎಂಟರಂದು ಮಧ್ಯಾಹ್ನ ಬಳಿಕ ವೈದ್ಯರು ನಾಪತ್ತೆಯಾಗಿದ್ದರು. ಈ ಬಗ್ಗೆ ಪತ್ನಿ ನೀಡಿದ ದೂರಿನಂತೆ ಬದಿಯಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ದ್ದರು.ವೈದ್ಯರ ಬೈಕ್ ಕುಂಬಳೆ ಪೇಟೆಯಲ್ಲಿ ಪತ್ತೆಯಾಗಿತ್ತು. ಮೊಬೈಲ್ ಕ್ಲಿನಿಕ್ ನಲ್ಲೇ ಬಿಟ್ಟು ತೆರಳಿದ್ದರು.

ಕಡಬ : ಆಟೋ ರಿಕ್ಷಾ ಹಾಗೂ ಪಿಕಪ್ ನಡುವೆ ಡಿಕ್ಕಿ ..4 ವರ್ಷ ಪ್ರಾಯದ ಬಾಲಕ ಸಾವು – Vishwanews24

ಕ್ಲಿನಿಕ್ ಗೆ ಬಂದಿದ್ದ ಮಹಿಳೆ ಜೊತೆ ವೈದ್ಯರು ಅನುಚಿತವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು , ಈ ಬಗ್ಗೆ ತಂಡವೊಂದು ಕ್ಲಿನಿಕ್ ಗೆ ತೆರಳಿ ವೈದ್ಯರನ್ನು ತರಾಟೆಗೆ ತೆಗೆದು ಬೆದರಿಕೆಯೊಡ್ಡಿದ್ದಾರೆ ಎನ್ನಲಾಗಿದೆ . ಇದಲ್ಲದೆ ಮಹಿಳೆ ಪೊಲೀಸರಿಗೆ ದೂರು ನೀಡಿದ್ದರು. ಈ ಬೆಳವಣಿಗೆ ಬಳಿಕ ಡಾ . ಕೃಷ್ಣಮೂರ್ತಿ ನಿಗೂಢವಾಗಿ ನಾಪತ್ತೆಯಾಗಿದ್ದರು

ನಾಪತ್ತೆ ಹಿನ್ನಲೆಯಲ್ಲಿ ಬದಿಯಡ್ಕ ಪೊಲೀಸರು ಕೇರಳ ಹಾಗೂ ಕರ್ನಾಟಕದ ಪೊಲೀಸ್ ಠಾಣೆ ಗಳಿಗೆ ಮಾಹಿತಿ ನೀಡಿದ್ದರು.

ಮೂಡುಬಿದಿರೆ: ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಪ್ರಕರಣಕ್ಕೆ ಟ್ವಿಸ್ಟ್.. ಬಾಲಕಿಗೆ ಲೈಂಗಿಕ ಕಿರುಕುಳ- ವೃದ್ಧನ ಬಂಧನ – Vishwanews24

 

Leave a Reply