ಬೆಂಗಳೂರು : ಭಾಷಾ ಸಾಮರಸ್ಯದ ವಿಚಾರದಲ್ಲಿ ಕರ್ನಾಟಕ-ಕೇರಳ ರಾಜ್ಯಗಳು ಪರಸ್ಪರ ಪೂರಕವಾಗಿ ನಡೆದುಕೊಂಡು ಬಂದಿವೆ. ಆದರೂ ಹೆಸರು ಬದಲಾವಣೆಯ ಚರ್ಚೆ ಮುನ್ನೆಲೆಗೆ ಬಂದಿದ್ದು ಹೇಗೆ. ಇದಕ್ಕೆ ಕಾರಣಗಳೇನು ಎಂಬುದನ್ನು ಪತ್ತೆ ಹಚ್ಚಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಕಾಸರಗೋಡಿನ ಗ್ರಾಮಗಳ ಕನ್ನಡ ಹೆಸರಿನ ಮಲಯಾಳೀಕರಣ ವಿವಾದದ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ಈ ಪ್ರಯತ್ನವು ಸಾಮರಸ್ಯವನ್ನು ಕೆಡಿಸುವ ಉದ್ದೇಶವನ್ನೇ ಹೊಂದಿದ್ದರೆ ಎರಡೂ ರಾಜ್ಯಗಳು ಜಾಗೃತರಾಗಬೇಕಾದ ಅಗತ್ಯವಿದೆ ಎಂದಿದ್ದಾರೆ.
ಕಾಸರಗೋಡಿನಲ್ಲಿ ಕನ್ನಡಕ್ಕೆ ಧಕ್ಕೆಯಾದರೆ ಹೋರಾಟ ನಡೆಸುವುದಾಗಿಯೂ, ಅದರ ನೇತೃತ್ವ ತಾವೇ ವಹಿಸುವುದಾಗಿಯೂ ಮಂಜೇಶ್ವರ ಶಾಸಕ ಅಶ್ರಫ್ ಹೇಳಿದ್ದಾರೆ.ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಅಭಿಮಾನ ಮೆರೆದಿದ್ದ ಅಶ್ರಫ್ ಹೇಳಿಕೆಯು ಮತ್ತಷ್ಟು ಸಮಾಧಾನ ತಂದಿದೆ. ಕನ್ನಡಪರವಾದ ನಿಲುವು ಪ್ರಕಟಿಸಿರುವ ಅಶ್ರಫ್ ಅವರನ್ನು ಅಭಿನಂದಿಸುವುದಾಗಿ ಅವರು ಹೇಳಿದ್ದಾರೆ.
ಕಾಸರಗೋಡಿನ ಗ್ರಾಮಗಳ ಕನ್ನಡ ಹೆಸರಿನ ಮಲಯಾಳೀಕರಣ ವಿಚಾರ ಮುನ್ನೆಲೆಗೆ ಬರುವುದರ ಹಿಂದೆ ಯಾವ ತಂತ್ರವಿತ್ತೋ ತಿಳಿಯದು. ಆದರೆ, ಕನ್ನಡ, ಕನ್ನಡಿಗ, ಕರ್ನಾಟಕಕ್ಕೆ ಏನೋ ಅಪಚಾರವಾಗುತ್ತಿದೆ ಎಂದು ಭಾವಿಸಿ ಕೇರಳ ಮುಖ್ಯಮಂತ್ರಿಗೆ ಪತ್ರ ಬರೆಯಲಾಯಿತು. ಆದರೆ, ಅಂಥ ಪ್ರಸ್ತಾವ ಇಲ್ಲ ಎಂಬ ಕೇರಳದ ಸ್ಪಷ್ಟನೆಯು ಸಮಾಧಾನ ಮೂಡಿಸಿದೆ ಎಂದು ಅವರು ತಿಳಿಸಿದ್ದಾರೆ.
ಕಾಸರಗೋಡು ಗ್ರಾಮಗಳ ಹೆಸರುಗಳ ಮಲಯಾಳೀಕರಣವನ್ನು ವಿರೋಧಿಸುವ ಮೂಲಕ ಕನ್ನಡಿಗರು ಕನ್ನಡದ ವಿಚಾರದಲ್ಲಿ ಮತ್ತೊಮ್ಮೆ ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಈ ಬಗ್ಗೆ ಅತಿ ಶೀಘ್ರದಲ್ಲೇ ಕೇರಳ ಸರ್ಕಾರದಿಂದ ಸ್ಪಷ್ಟೆನೆ ಬರುವಂತೆ ಮಾಡಿದ್ದಾರೆ. ಈ ಸಾತ್ವಿಕ ಹೋರಾಟದಲ್ಲಿ ಭಾಗಿಯಾದ ಕನ್ನಡ ಮನಸ್ಸುಗಳನ್ನೂ ನಾನು ಈ ಸಂದರ್ಭದಲ್ಲಿ ಅಭಿನಂದಿಸುವುದಾಗಿ ಅವರು ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…