ಕಾಸರಗೋಡು : ಜನಪ್ರಿಯ ಸೋಷಿಯಲ್ ಮೀಡಿಯ ಇನ್ಫ್ಲುಎನ್ಸರ್ ಆದೂರು ಮೂಲದ ಚಿನ್ನು ಪಾಪು (ರೇಶ್ಮಾ 24) ಕಾಸರಗೋಡು ನಗರ ಹೊರ ವಲಯದ ಉಳಿಯತ್ತಡ್ಕದ ಅಪಾರ್ಟ್ ಮೆಂಟ್ ವೊಂದರಲ್ಲಿ ಸೋಮವಾರ ಮಧ್ಯಾಹ್ನ ಆತ್ಮಹತ್ಯೆಗೆ ಶರಣಾಗಿದ್ದಾರೆ.
ರೇಶ್ಮಾ ಅವರ ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಸೋಮವಾರ ಮಧ್ಯಾಹ್ನ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಈಕೆಯನ್ನು ಸ್ಥಳಿಯರು ಆಸ್ಪತ್ರೆಗೆ ತಲುಪಿಸಿದರೂ ಅದಾಗಲೇ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.
ಇದನ್ನೂ ಓದಿ :
ಚಿನ್ನು ಪಾಪು ಎಂದೇ ಸಾಮಾಜಿಕ ಜಾಲತಾಣ ವೇದಿಕೆಗಳಲ್ಲಿ ಕಾಣಿಸಿಕೊಂಡು ಕಾಸರಗೋಡು ಭಾಷೆಯಲ್ಲೇ ಮಾತನಾಡಿ ಜನಪ್ರಿಯತೆ ಪಡೆದಿದ್ದ ಈಕೆಗೆ 2 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಇದ್ದರು. ರೇಶ್ಮಾ ಈ ಮೊದಲೇ ವಿವಾಹಿತಳಾಗಿದ್ದು, ಒಂದು ಮಗುವನ್ನೂ ಹೊಂದಿದ್ದ ಈಕೆ ಪತಿಯಿಂದ ವಿಚ್ಛೇದಿತಳಾಗಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ.
ಸಾಮಾಜಿಕ ಜಾಲತಾಣದ ಪ್ರಭಾವೀ ವೇದಿಕೆಯಲ್ಲಿ ಕಾಣಿಸಿಕೊಂಡು ಅಪಾರ ವೀಕ್ಷಕರನ್ನು ಹೊಂದಿದ್ದ ಈಕೆಯ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ವಿಚ್ಚೇದನದಿಂದ ಮಾನಸಿಕ ಒತ್ತಡ ಅಥವಾ ಇನ್ಯಾವುದೇ ಕಾರಣದಿಂದ ಆತ್ಮಹತ್ಯೆಗೆ ಶರಣಾಗಿರಬಹುದು ಎಂಬ ಬಗ್ಗೆ ಸ್ಪಷ್ಟವಾಗಿಲ್ಲ. ಕಾಸರಗೋಡು ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ರೇಶ್ಮಾಳ ಮೊಬೈಲ್ ನ್ನು ತಪಾಸಣೆ ನಡೆಸಲು ಪೊಲೀಸರು ಮುಂದಾಗಿದ್ದಾರೆ.
ಇದನ್ನೂ ಓದಿ :
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…