Featured

ಕಾಸರಗೋಡು: ತುಳು ಭಾಷೆಯನ್ನು ಅಧಿಕೃತ ಭಾಷೆಯನ್ನಾಗಿ ಮಾಡುವಂತೆ ಕೇರಳ ಸರ್ಕಾರಕ್ಕೆ ಮನವಿ -Vishwanews24

ಕಾಸರಗೋಡು: ತುಳು ಭಾಷೆಯನ್ನು ಅಧಿಕೃತ ಭಾಷೆಯನ್ನಾಗಿ ಮಾಡುವಂತೆ ಕೇರಳ ಸರ್ಕಾರಕ್ಕೆ ಮನವಿ -Vishwanews24

ಕಾಸರಗೋಡು : ತುಳುನಾಡಿನ ಆಚಾರ ವಿಚಾರ ಲಿಪಿ ಸಂಸ್ಕ್ರತಿ ಮತ್ತು ಭಾಷೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿಯುತ ಕೆಲಸ ಕಾರ್ಯಗಳನ್ನು ನಿಸ್ವಾರ್ಥವಾಗಿ ಮಾಡಲು ಯುವಕರು ಹಾಗೂ ಹಿರಿಯರು ಒಗ್ಗೂಡಿಕೊಂಡು ಒಂದಾಗಿರುವ ಸಂಘಟನೆ ‘ಜೈ ತುಳುನಾಡ್ ಸಂಘಟನೆ’ ಇದರ ಕಾಸರಗೋಡು ಘಟಕದಿಂದ ಘಟಕದ ಅಧ್ಯಕ್ಷ ಹರಿಕಾಂತ್ ಕಾಸರಗೋಡು ಇವರ ಮುಂದಾಳುತ್ವದಲ್ಲಿ, ಕೇರಳ ರಾಜ್ಯದಲ್ಲಿ ತುಳು ಬಾಷೆ ಯನ್ನು ಅಧಿಕೃತ ಭಾಷೆಯನ್ನಾಗಿ ಮಾಡುವ ಬೇಡಿಕೆಯನ್ನು ಸರಕಾರದ ಗಮನಕ್ಕೆ ತರಬೇಕು ಎಂದು ಶಾಸಕರ ಕಚೇರಿಗೆ ಭೇಟಿ ನೀಡಿ ಮನವಿ ಸಲ್ಲಿಸಲಾಯಿತು.

ದಾಖಲೆಯ ಜೊತೆಗಿರುವ ಮನವಿಯನ್ನು ಮಂಜೇಶ್ವರ ಶಾಸಕ ಎ ಕೆ ಎಂ ಅಶ್ರಫ್ ಹಾಗೂ ಕ್ಷೇತ್ರದ ಪ್ರಸ್ತುತ ಶಾಸಕರಾದ ಸಿ ಯೆಚ್ ಕುಂಞಂಬುರವರಿಗೂ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ಘಟಕದ ಸದಸ್ಯರ ಜೊತೆ ಮಾತನಾಡಿದ ಶಾಸಕ ಎ ಕೆ ಎಂ ಅಶ್ರಫ್ ಮುಂಬರುವ ಅಧಿವೇಶನದಲ್ಲಿ ಈ ವಿಷಯವನ್ನು ಸರಕಾರದ ಗಮನಕ್ಕೆ ತಂದು ಮನವರಿಕೆ ಮಾಡುವುದಾಗಿ ಭರವಸೆ ನೀಡಿದರು ಹಾಗೂ ಉದುಮ ಶಾಸಕ ಸಿ . ಎಚ್ ಕುಂಞಂಬು ಮಾತನಾಡಿ ತುಳು ಭಾಷೆಯನ್ನು ಕೇರಳದ ಅಧಿಕೃತ ಭಾಷೆಯನ್ನಾಗಿ ಮಾಡುವ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಿ ಪ್ರಯತ್ನಿಸುವುದಾಗಿ ಎಂದು ಭರವಸೆ ನೀಡಿದರು.

ಮನವಿ ಸಲ್ಲಿಸುವ ಸಂದರ್ಭದಲ್ಲಿ ಜೈ ತುಳುನಾಡ್ ಕಾಸರಗೋಡು ಘಟಕದ ಅಧ್ಯಕ್ಷ ಹರಿಕಾಂತ್ ಕಾಸರಗೋಡು, ಕಾರ್ಯದರ್ಶಿ ಕಾರ್ತಿಕ್ ಪೆರ್ಲ, ಕೋಶಾಧಿಕಾರಿ ಪ್ರಶಾಂತ್ ರೈ ಬಂದಡ್ಕ, ಮುಖ್ಯ ಸಂಚಾಲಕ ಪ್ರವೀಶ್ ಕುಲಾಲ್ ಹಾಗು ಸದಸ್ಯ ದೇವಿಪ್ರಸಾದ್ ರೈ ಉಪಸ್ಥಿತರಿದ್ದರು

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

14 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

14 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

14 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

15 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

15 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

15 hours ago