ಕಾಸರಗೋಡು : ಪೊಲೀಸರಿಗೆ ದೂರು ನೀಡಿದ ವೈಷಮ್ಯದಿಂದ ದುಷ್ಕರ್ಮಿಯೋರ್ವ ಅಂಗಡಿಗೆ ನುಗ್ಗಿ ಯುವತಿಗೆ ಬೆಂಕಿ ಹಚ್ಚಿದ ಪರಿಣಾಮ ತೀವ್ರವಾಗಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ.
ಬೇಡಡ್ಕ ನಿವಾಸಿ ರಮಿತಾ ( 22) ಮೃತ ಯುವತಿ. ತಮಿಳುನಾಡು ಮೂಲದ ರಾಮಕೃತ (57) ಬೆಂಕಿ ಹಚ್ಚಿದ ಆರೋಪಿ.
ಮೃತ ರಮಿತಾ ಬೇಡಡ್ಕದ ಮನ್ನಡ್ಕ ಎಂಬಲ್ಲಿ ಅಂಗಡಿ ನಡೆಸುತ್ತಿದ್ದಳು. ಆರೋಪಿ ರಾಮಕೃತ ಪಾನಮತ್ತನಾಗಿ ಬಂದು ಆಕೆಗೆ ದಿನನಿತ್ಯ ಕಿರುಕುಳ ನೀಡುತ್ತಿದ್ದನು. ಈ ಬಗ್ಗೆ ರಮಿತಾ ಬೇಡಡ್ಕ ಠಾಣಾ ಪೊಲೀಸರಿಗೆ ದೂರು ನೀಡಿದ್ದಳು. ಇದೇ ಕಾರಣಕ್ಕೆ ವೈಷಮ್ಯದಿಂದ ಎ.8 ರಂದು ಸಂಜೆ 3 ಗಂಟೆಗೆ ಅಂಗಡಿಯೊಳಗೆ ನುಗ್ಗಿದ ಆರೋಪಿ ಯುವತಿಗೆ ಟಿನ್ನರ್ ಸುರಿದು ಬೆಂಕಿ ಹಚ್ಚಿದ್ದನು. ಕೃತ್ಯ ನಡೆಸಿ ಪರಾರಿಯಾಗಲೆತ್ನಿಸಿದ್ದ ಆರೋಪಿಯನ್ನು ನಾಗರಿಕರು ಹಿಡಿದು ಪೊಲೀಸರಿಗೊಪ್ಪಿಸಿದ್ದರು.
ತೀವ್ರವಾಗಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಯುವತಿ ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…