ಕಾಸರಗೋಡು: ನಾಪತ್ತೆಯಾಗಿದ್ದ ವಿವಿಧ ಧರ್ಮಗಳಿಗೆ ಸೇರಿದ ಜೋಡಿಯೊಂದು ಇಲ್ಲಿನ ಲಾಡ್ಜ್‌ವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಮೃತರನ್ನು ರಾಜಾಪುರ ಕಲ್ಲಾರು ಒಕ್ಲಾವು ನಿವಾಸಿ ಕೆ.ಎಂ. ಮಹಮ್ಮದ್ ಶರೀಫ್ (40) ಮತ್ತು ಕಲ್ಲಾರು ಅಡಕಂ ಪುಲಿಕುಳಿಯ ಸಿಂಧು (36) ಎಂದು ಗುರುತಿಸಲಾಗಿದೆ. ಜನವರಿ 7ರಂದು ಇಬ್ಬರೂ ನಾಪತ್ತೆಯಾಗಿದ್ದರು. ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ರಾಜಾಪುರ ಪೊಲೀಸರು ಜೋಡಿಗಾಗಿ ಹುಡುಕಾಟ ನಡೆಸಿದ್ದರು. ಇದೀಗ ಗುರುವಾಯೂರು ಪಡಿಯಾರ ನಾಡೆಯ ಲಾಡ್ಜ್‌ನ ಕೊಠಡಿಯೊಳಗೆ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರೂ ಪತ್ತೆಯಾಗಿದ್ದಾರೆ.
ಮೊಹಮ್ಮದ್ ಮತ್ತು ಸಿಂಧು ಬುಧವಾರ ಲಾಡ್ಜ್‌ನಲ್ಲಿ ಕೊಠಡಿಯನ್ನು ಬಾಡಿಗೆಗೆ ತೆಗೆದುಕೊಂಡಿದ್ದರು. ಮಧ್ಯಾಹ್ನದವರೆಗೂ ತಮ್ಮ ಕೊಠಡಿಯ ಬಾಗಿಲು ತೆರೆಯದ ಕಾರಣ ಲಾಡ್ಜ್ ಮ್ಯಾನೇಜರ್ ಡುಪ್ಲಿಕೇಟ್ ಕೀ ಮೂಲಕ ಬಾಗಿಲು ತೆರೆದು ನೋಡಿದಾಗ ಇಬ್ಬರೂ ನೇಣು ಬಿಗಿದುಕೊಂಡಿರುವುದು ಕಂಡು ಬಂದಿದೆ. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…