Featured

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ

ಕಾಸರಗೋಡು : ನಿಯಂತ್ರಣ ತಪ್ಪಿದ ಆಂಬುಲೆನ್ಸ್ ಡಿವೈಡರ್‌ಗೆ ಬಡಿದು ಮಗುಚಿ ಬಿದ್ದು ರೋಗಿ ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಬಂದ್ಯೋಡಿನಲ್ಲಿ ಮಂಗಳವಾರ ತಡೆರಾತ್ರಿ ನಡೆದಿದೆ.

ಉಪ್ಪಳ ಕೆಎಸ್‌ಇಬಿ ಗುತ್ತಿಗೆದಾರ, ಬಂದ್ಯೋಡು ಸಮೀಪದ ಅಡ್ಕ ನಿವಾಸಿ ಅಶೋಕ (41) ಮೃತಪಟ್ಟವರು. ಅಪಘಾತದಲ್ಲಿ ಗಾಯಗೊಂಡ ಇವರ ಪತ್ನಿ ಪ್ರತಿಭಾ, ಸಹೋದರ ರಾಜೇಶ್, ರಾಜೇಶ್ ಅವರ ಪತ್ನಿ ಹಾಗೂ ಆಂಬುಲೆನ್ಸ್ ಚಾಲಕನನ್ನು ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅನಾರೋಗ್ಯದ ಕಾರಣ ಅಶೋಕ ಅವರು ಉಪ್ಪಳದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿ ಅವರ ಆರೋಗ್ಯ ಸ್ಥಿತಿ ಸುಧಾರಿಸದಿದ್ದಾಗ, ಹೆಚ್ಚಿನ ಚಿಕಿತ್ಸೆಗಾಗಿ ತುರ್ತಾಗಿ ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವಾಗ ಈ ಅಪಘಾತ ನಡೆದಿದೆ.

ಗಂಭೀರ ಸ್ಥಿತಿಯಲ್ಲಿದ್ದ ಅಶೋಕ ಅವರನ್ನು ಕೂಡಲೇ ಉಪ್ಪಳದ ಆಸ್ಪತ್ರೆಗೆ ಮತ್ತು ಆ ನಂತರ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ, ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದರು. ಮೃತರು ಪತ್ನಿ, ಏಕೈಕ ಪುತ್ರನನ್ನು‌ ಅಗಲಿದ್ದಾರೆ.

Vishwa News 24

Recent Posts

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

13 minutes ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

1 hour ago

ಉಡುಪಿ : ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ – vishwanews24

ಉಡುಪಿ : ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಶೀರೂರು…

1 hour ago

ಪುತ್ತೂರು: ಬ್ರೇಕ್ ಫೇಲ್‌ ಆಗಿ ಮನೆಯ ಕಾಂಪೌಂಡ್‌ಗೆ ಢಿಕ್ಕಿ ಹೊಡೆದ ಕೆಎಸ್ಸಾರ್ಟಿಸಿ ಬಸ್ – vishwanews24

ಪುತ್ತೂರು: ಬ್ರೇಕ್ ಫೇಲ್‌ ಆಗಿ ಮನೆಯ ಕಾಂಪೌಂಡ್‌ಗೆ ಢಿಕ್ಕಿ ಹೊಡೆದ ಕೆಎಸ್ಸಾರ್ಟಿಸಿ ಬಸ್ ಪುತ್ತೂರು: ಬ್ರೇಕ್ ವೈಫಲ್ಯಗೊಂಡ ಪರಿಣಾಮ ನಿಯಂತ್ರಣ…

1 hour ago

ರಾಜೀನಾಮೆ ವದಂತಿ: ಸಚಿವ ನಾಗೇಂದ್ರ ಸ್ಪಷ್ಟನೆ – vishwanews24

ರಾಜೀನಾಮೆ ವದಂತಿ: ಸಚಿವ ನಾಗೇಂದ್ರ ಸ್ಪಷ್ಟನೆ ಬೆಂಗಳೂರು: ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಹರಡಿರುವ ವದಂತಿಯನ್ನು ಸಂಪೂರ್ಣವಾಗಿ ತಳ್ಳಿ ಹಾಕಿರುವ ಬಿ.ನಾಗೇಂದ್ರ,…

2 hours ago

ನಮ್ಮ ಧರ್ಮದ ಬಗ್ಗೆ ನಾವೇ ತೀರ್ಮಾನಿಸುತ್ತೇವೆ : ಹಿಜಾಬ್ ಕುರಿತ ಹೈಕೋರ್ಟ್ ತೀರ್ಪಿಗೆ ಓವೈಸಿ ಆಕ್ರೋಶ – vishwanews24

ಅಲಹಾಬಾದ್ ಹೈಕೋರ್ಟ್ ತೀರ್ಪು ಇಸ್ಲಾಂ ಧರ್ಮದ ಮೇಲಿನ ದಾಳಿ ನಮ್ಮ ಧರ್ಮ, ನಾವೇ ನಿರ್ಧರಿಸುತ್ತೇವೆ : ಓವೈಸಿ ಆಕ್ರೋಶ ಹೈದರಾಬಾದ್:…

2 hours ago