ಕಾಸರಗೋಡು: ಯುವಕನೊಬ್ಬ ನೀಡುತ್ತಿದ್ದ ಕಿರುಕುಳ ಸಹಿಸಲಾರದೆ ಯುವತಿಯೋರ್ವಳು ಮನೆಯಲ್ಲಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಅಡೂರಿನಲ್ಲಿ ನಡೆದಿದೆ. ಅಡೂರು ಚಾಮಕೊಚ್ಚಿ ಅನ್ನಪ್ಪಾಡಿಯ ಮುದ್ದ ನಾಯ್ಕ್ ರವರ ಪುತ್ರಿ ದಿವ್ಯಾ (26) ಮೃತಪಟ್ಟವರು. ದಿವ್ಯಾ ಬಂದಡ್ಕದ ಖಾಸಗಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು.
ನಿನ್ನೆ ದಿವ್ಯಾ ಮನೆಯ ಕೋಣೆಯಲ್ಲಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ದಿವ್ಯಾ ಮಂಗಳವಾರ ರಾತ್ರಿ ಲ್ಯಾಬ್ ನಲ್ಲಿ ಕೆಲಸ ಮುಗಿಸಿ ಬುಧವಾರ ಬೆಳಿಗ್ಗೆ ಮನೆಗೆ ಬಂದಿದ್ದರು. ಸ್ಥಳದಲ್ಲಿ ದಿವ್ಯಾಳ ಆತ್ಮಹತ್ಯೆ ಪತ್ರ ಲಭಿಸಿದ್ದು ಪೊಲೀಸರಿಗೆ ಲಭಿಸಿದ ಮಾಹಿತಿಯಂತೆ ಯುವಕನೋರ್ವನ ಕೇಂದ್ರೀಕರಿಸಿ ಆದೂರು ಪೊಲೀಸರು ತನಿಖೆ ಅರಂಭಿಸಿದ್ದಾರೆ ಎನ್ನಲಾಗಿದೆ.
ಯುವಕ ನಿರಂತರವಾಗಿ ಮೊಬೈಲ್ ನಲ್ಲಿ ಯುವತಿಗೆ ಕಿರುಕುಳ ನೀಡುತ್ತಿದ್ದನೆನ್ನಲಾಗಿದೆ. ಈ ಬಗ್ಗೆ ಆದೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…