Featured

ಕಾಸರಗೋಡು: ಪುತ್ರನ ಅಗಲಿಕೆಯಿಂದ ನೊಂದ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು – vishwanews24

ಕಾಸರಗೋಡು: ಪುತ್ರನ ಅಗಲಿಕೆಯಿಂದ ನೊಂದ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

ಕಾಸರಗೋಡು,: ಪುತ್ರನ ಅಗಲಿಕೆಯಿಂದ ನೊಂದ ದಂಪತಿ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮೇಲ್ಪರಂಬ ಪೊಲೀಸ್ ಠಾಣಾ ವ್ಯಾಪ್ತಿಯ ಪೋಯಿನಾಚಿಯಲ್ಲಿ ನಡೆದಿದೆ.

ಮೃತರನ್ನು ಪೋಯಿನಾಚಿ ಪರಂಬ ನಿವಾಸಿಗಳಾದ ವೇಣುಗೋಪಾಲನ್ ನಾಯರ್ (55) ಮತ್ತು ಅವರ ಪತ್ನಿ ಸ್ಮಿತಾ (45) ಎಂದು ಗುರುತಿಸಲಾಗಿದೆ.

ಇವರ ಏಕೈಕ ಪುತ್ರ, ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದ ಎಂ. ಶಿವನಂದನ್ (19), ಕೇವಲ ಎರಡು ತಿಂಗಳ ಹಿಂದೆಯಷ್ಟೇ ರೈಲು ಢಿಕ್ಕಿಯಾಗಿ ಮೃತಪಟ್ಟಿದ್ದರು. ಮಗನ ಅಕಾಲಿಕ ಮರಣದ ನಂತರ ದಂಪತಿ ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ:

ಶುಕ್ರವಾರ ಬೆಳಿಗ್ಗೆ 9 ಗಂಟೆಯಾದರೂ ಮನೆಯ ಬಾಗಿಲು ತೆರೆಯದಿದ್ದಾಗ ಅನುಮಾನಗೊಂಡ ನೆರೆಹೊರೆಯವರು ಪರಿಶೀಲಿಸಿದಾಗ, ದಂಪತಿ ಕೊಠಡಿಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ.

ಮಂಗಳೂರಿನ ಇಂಜಿನಿಯರಿಂಗ್ ಕಾಲೇಜೊಂದರಲ್ಲಿ ಓದುತ್ತಿದ್ದ ಶಿವನಂದನ್, ಕಳೆದ ಡಿಸೆಂಬರ್ 29 ರಂದು ಬೇಕಲ ಉತ್ಸವದ ವೇಳೆ ರೈಲು ಢಿಕ್ಕಿಯಾಗಿ ಸಾವನ್ನಪ್ಪಿದ್ದರು. ಅಂದಿನಿಂದ ವೇಣುಗೋಪಾಲನ್ ಮತ್ತು ಸ್ಮಿತಾ ದಂಪತಿ ತೀವ್ರ ಮನನೊಂದಿದ್ದರು.

ವೇಣುಗೋಪಾಲನ್ ನಾಯರ್ ಅವರು ಈ ಹಿಂದೆ ವಿದೇಶದಲ್ಲಿ ಉದ್ಯೋಗದಲ್ಲಿದ್ದರು. ಬಳಿಕ ಪೋಯಿನಾಚಿಯಲ್ಲಿ ಟ್ರಾವೆಲ್ ಏಜೆನ್ಸಿಯೊಂದನ್ನು ನಡೆಸುತ್ತಿದ್ದರು.

ಮೇಲ್ಪರಂಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

21 hours ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

21 hours ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

22 hours ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

24 hours ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago