ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ ಭಾನುವಾರ ಸಂಜೆ ಪ್ರವಾಸಕ್ಕೆ ಬಂದಿದ್ದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದು, ಮತ್ತಿಬ್ಬರು ವಿದ್ಯಾರ್ಥಿಗಳನ್ನು ರಕ್ಷಿಸಲಾಗಿದೆ.
ಮೃತಪಟ್ಟ ವಿದ್ಯಾರ್ಥಿಗಳನ್ನು ಕೊಟ್ಟಾಯಂ ಜಿಲ್ಲೆಯ ಚಂಗನಾಶೇರಿಯ ನಿವಾಸಿಗಳಾದ ಅಂಕಿತ್ (20) ಮತ್ತು ಅಪ್ಪು ಟಿ. ಅಬ್ರಹಾಂ (20) ಎಂದು ಗುರುತಿಸಲಾಗಿದೆ.
ಭಾನುವಾರ ಸಂಜೆ ಸುಮಾರು 6:30ರ ಸುಮಾರಿಗೆ ಈ ಘಟನೆ ನಡೆದಿದೆ. ಒಟ್ಟು ಆರು ಮಂದಿ ವಿದ್ಯಾರ್ಥಿಗಳ ತಂಡ ಪ್ರವಾಸಕ್ಕಾಗಿ ಕಡಲತೀರಕ್ಕೆ ಆಗಮಿಸಿದ್ದು, ಅವರಲ್ಲಿ ನಾಲ್ವರು ಸಮುದ್ರಕ್ಕಿಳಿದಿದ್ದರು.
ವಿದ್ಯಾರ್ಥಿಗಳು ಬೇಕಲ ಕೋಟೆಯನ್ನು ವೀಕ್ಷಿಸಲು ಬಂದಿದ್ದರು. ಘಟನೆಯ ನಂತರ ನಾಪತ್ತೆಯಾದ ವಿದ್ಯಾರ್ಥಿಗಳಿಗಾಗಿ ತಕ್ಷಣವೇ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ತಡರಾತ್ರಿಯವರೆಗೂ ಇಬ್ಬರು ವಿದ್ಯಾರ್ಥಿಗಳ ಸುಳಿವು ಪತ್ತೆಯಾಗಿರಲಿಲ್ಲ.
ಸಮುದ್ರಪಾಲಾದ ವಿದ್ಯಾರ್ಥಿಗಳಿಗಾಗಿ ಕರಾವಳಿ ಕಾವಲು ಪಡೆ, ಅಗ್ನಿಶಾಮಕ ಮತ್ತು ರಕ್ಷಣಾ ದಳದ ಸಿಬ್ಬಂದಿ ಹಾಗೂ ಸ್ಥಳೀಯ ನಿವಾಸಿಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…