ಕಾಸರಗೋಡು : ಮನೆಯ ಅಂಗಳದಲ್ಲಿ ಹಿಟಾಚಿ ತೊಳೆಯುವ ವೇಳೆ ಪಲ್ಟಿ : ಯುವಕ ಸಾವು
ಕಾಸರಗೋಡು : ಮನೆಯ ಅಂಗಳದಲ್ಲಿ ಹಿಟಾಚಿ ತೊಳೆಯುವ ವೇಳೆ ಪಲ್ಟಿಯಾಗಿ ಯುವಕನೊಬ್ಬ ಸಾವನಪ್ಪಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.
ಮೃತ ಯುವಕನನ್ನು ಕಾಸರಗೋಡು ಮಹಿಳಾ ಕಾಂಗ್ರೇಸ್ ನ ಜಿಲ್ಲಾಧ್ಯಕ್ಷೆ ಮಿನಿ ಚಂದ್ರನ್ ಅವರ ಪುತ್ರ ಪ್ರೀತಂ ಲಾಲ್ ಚಂದ್ ಎಂದು ಗುರುತಿಸಲಾಗಿದೆ. ಅವರಿಗೆ 23 ವರ್ಷ. ಮಂಗಳವಾರ ಬೆಳಗ್ಗೆ ಪ್ರೀತಂ ಲಾಲ್ ತನ್ನ ಅಜ್ಜಿಯ ಮನೆಯಲ್ಲಿ ಹಿಟಾಟಿಯನ್ನು ತೊಳೆಯುತ್ತಿದ್ದಾಗ ಯಂತ್ರ ಪಲ್ಟಿಯಾಗಿದೆ. ಈ ವೇಳೆ ಪ್ರೀತಂ ಹಿಟಾಚಿ ಅಡಿ ಸಿಕ್ಕಿ ಬಿದ್ದಿದ್ದಾನೆ. ಹಿಟಾಚಿಯನ್ನು ಮೇಲೆತ್ತಿ ಅವನನ್ನು ಹೊರತೆಗೆಯಲು ನಮಗೆ ಬಹಳ ಸಮಯ ಹಿಡಿದಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋದರು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.
ಪ್ರೀತಂ ಲಾಲ್ ಚಂದ್ ತನ್ನ ಸಹೋದರ ಗೌತಮ್ ಲಾಲ್ ಅವರ ಹಿಟಾಚಿ ಯಂತ್ರದ ಕೆಲಸದಲ್ಲಿ ಸಹಾಯಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಈ ಬಗ್ಗೆ ಬೇಡಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…