Featured

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಉಪ್ಪಳದಲ್ಲಿ ನಡೆದಿದೆ.

ಉಪ್ಪಳದ ಪೆರಿಂಗಾಡಿಯ ಅಲಿ ಹಾಗೂ ಸುಲೈಖಾ ದಂಪತಿಯ ಪುತ್ರ ಅಬೂಬಕರ್ ಅಸನ್ (13) ಮೃತ ವಿದ್ಯಾರ್ಥಿ. ಅವರು ಮಂಗಲ್ಪಾಡಿ ಸರ್ಕಾರಿ ಪ್ರೌಢಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು.

ಆಗಸ್ಟ್ 11ರ ಮಂಗಳವಾರ ಸಂಜೆ ಈ ಘಟನೆ ನಡೆದಿದ್ದು, ಅಬೂಬಕರ್ ತಮ್ಮ ಮನೆಯ ಸಮೀಪದಲ್ಲಿರುವ ಕೆರೆಗೆ ಸ್ನೇಹಿತರೊಂದಿಗೆ ಸ್ನಾನಕ್ಕೆ ತೆರಳಿದ್ದರು. ಸ್ನಾನ ಮುಗಿಸಿದ ಬಳಿಕ ಸ್ನೇಹಿತರೆಲ್ಲರೂ ಮನೆಗೆ ಮರಳಿದ್ದರು. ಆದರೆ ಅಬೂಬಕರ್ ಮಾತ್ರ ಮನೆಗೆ ಬಾರದ ಕಾರಣ ಆತಂಕಗೊಂಡ ಕುಟುಂಬಸ್ಥರು ಹಾಗೂ ಸ್ಥಳೀಯರು ಸುತ್ತಮುತ್ತ ಹುಡುಕಾಟ ನಡೆಸಿದರು. ಆದರೂ ಅವರ ಯಾವುದೇ ಸುಳಿವು ಪತ್ತೆಯಾಗಿರಲಿಲ್ಲ.

ನಂತರ ಸಮೀಪದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಅಬೂಬಕರ್ ಕೆರೆಯಲ್ಲಿ ಮುಳುಗಿರುವುದು ಪತ್ತೆಯಾಗಿದೆ.

ಈ ಹಿನ್ನೆಲೆಯಲ್ಲಿ ಸ್ಥಳೀಯರು ಹಾಗೂ ಉಪ್ಪಳದಿಂದ ಆಗಮಿಸಿದ ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಕೆರೆಯಲ್ಲಿ ಶೋಧ ಕಾರ್ಯ ನಡೆಸಿದರು. ತಡರಾತ್ರಿ ಅಬೂಬಕರ್ ಅವರ ಮೃತದೇಹವನ್ನು ನೀರಿನಿಂದ ಹೊರತೆಗೆಯಲಾಯಿತು.

ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ಘೋಷಿಸಿದರು. ಮೃತದೇಹವನ್ನು ಮಂಗಲ್ಪಾಡಿ ತಾಲೂಕು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago