ಕಾಸರಗೋಡು: ಹತ್ತನೇ ತರಗತಿ ವಿದ್ಯಾರ್ಥಿನಿಯೋರ್ವಳು ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬಂದಡ್ಕದಲ್ಲಿ ನಡೆದಿದೆ.
ಬಂದಡ್ಕ ಊಙತಡ್ಕದ ಸವಿತಾ ಎಂಬವರ ಪುತ್ರಿ ದೇವಿಕಾ (15) ಮೃತಪಟ್ಟವರು. ಕುಂಡಂಗುಳಿ ಹಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿನಿಯಾಗಿದ್ದಳು.
ಮಂಗಳವಾರ ದೇವಿಕಾಳ ತಂದೆ ಸತೀಶ್ ರ ಪುಣ್ಯತಿಥಿ ದಿನದಂದೇ ಕೃತ್ಯ ನಡೆಸಲಾಗಿದೆ. ಬೆಳಿಗ್ಗೆ ಅಜ್ಜಿ ಮತ್ತು ಸಹೋದರ ಮಾತ್ರ ಮನೆಯಲ್ಲಿದ್ದಾಗ ಘಟನೆ ನಡೆದಿದೆ. ತಾಯಿ ಸವಿತಾ ಬಂದಡ್ಕ ಗ್ರಾಮೀಣ ಬ್ಯಾಂಕ್ ಸಮೀಪ ಹೊಟೇಲ್ ನಡೆಸುತ್ತಿದ್ದಾರೆ.
ಬೆಳಿಗ್ಗೆ ದೇವಿಕಾ ನಾಪತ್ತೆಯಾದ ಹಿನ್ನಲೆಯಲ್ಲಿ ಸಹೋದರ ಶೋಧ ನಡೆಸಿದಾಗ ಸೀರೆಯಿಂದ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ದೇವಿಕಾ ಬಾಲ ಸಂಘದ ಸದಸ್ಯೆಯಾಗಿದ್ದಳು.
ಬೇಡಡ್ಕ ಠಾಣಾ ಪೊಲೀಸರು ಮಹಜರು ನಡೆಸಿದರು. ಫಾರೆನ್ಸಿಕ್ ತಜ್ಞರು ಸ್ಥಳಕ್ಕೆ ಆಗಮಿಸಿ ಮಾಹಿತಿ ಕಲೆ ಹಾಕಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…