ಬೆಂಗಳೂರು: ಕಿಕ್ ಬಾಕ್ಸಿಂಗ್ನಲ್ಲಿ ಪಾಲ್ಗೊಂಡಿದ್ದ ಮೈಸೂರಿನ ಯುವಕನೊಬ್ಬ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮೃತ ಯುವಕನನ್ನು ನಿಖಿಲ್ (24)ಎಂದು ಗುರುತಿಸಲಾಗಿದ್ದು, ಈತ ಬೆಂಗಳೂರಿನ ಕೆಂಗೇರಿಯಲ್ಲಿ ಕೆ1 ಕಿಕ್ ಬಾಕ್ಸರ್ ಆರ್ಗನೈಸೇಷನ್ ವತಿಯಿಂದ ಜುಲೈ 10ರಂದು ನಡೆದ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ.
ಇನ್ನು ಕಿಕ್ ಬಾಕ್ಸಿಂಗ್ನ ರಿಂಗ್‌ನಲ್ಲಿ ಸೆಣಸಾಡುತ್ತಿರುವಾಗ ಎದುರಾಳಿಯು ನಿಖಿಲ್ ತಲೆಗೆ ಹೊಡೆದ ಏಟಿಗೆ ಬಾಕ್ಸಿಂಗ್ ರಿಂಗ್ನಲ್ಲೇ ನಿಖಿಲ್ ಕೆಳಗೆ ಬಿದ್ದವರು ಮೇಲಕ್ಕೆ ಏಳಲೇ ಇಲ್ಲ. ತಕ್ಷಣ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಎರಡು ದಿನ ಕೋಮಾದಲ್ಲಿದ್ದ ನಿಖಿಲ್, ಚಿಕಿತ್ಸೆ ಫಲಿಸದೆ ಬುಧವಾರ ಕೊನೆಯುಸಿರೆಳೆದಿದ್ದಾನೆ.
ನಿಖಿಲ್ ತಂದೆ ಸುರೇಶ್ ಕರಾಟೆ ಪಟುವಾಗಿದ್ದಾರೆ. ನಿಖಿಲ್ ಮೈಸೂರು ಜಯನಗರದ ವಿಕ್ರಂ ಬಳಿ ತರಬೇತಿ ಪಡೆಯುತ್ತಿದ್ದ .
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…