Featured

ಕಿಚ್ಚ ಸುದೀಪ್ ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿಯಾಗಿ ನೇಮಕ : ಪ್ರತಿ ಜಿಲ್ಲೆಗೆ ಒಂದರಂತೆ 31 ಗೋವುಗಳನ್ನು ದತ್ತು ಪಡೆಯಲು‌ ನಿರ್ಧಾರ – Vishwanews24

ಕಿಚ್ಚ ಸುದೀಪ್ ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿಯಾಗಿ ನೇಮಕ : ಪ್ರತಿ ಜಿಲ್ಲೆಗೆ ಒಂದರಂತೆ 31 ಗೋವುಗಳನ್ನು ದತ್ತು ಪಡೆಯಲು‌ ನಿರ್ಧಾರ

ಬೆಂಗಳೂರು: ಈಗಾಗಲೇ ಸಾಕಷ್ಟು ಸಮಾಜಸೇವೆ ಮಾಡಿರುವ ಕಿಚ್ಚ ಸುದೀಪ್ ಅವರನ್ನು ಕರ್ನಾಟಕ ಸರಕಾರವು ‘ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿ’ಯನ್ನಾಗಿ ನೇಮಕ ಮಾಡಿದೆ. ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿ ನೇಮಕಾತಿ ಪತ್ರವನ್ನು ಇಲಾಖೆ ಸಚಿವ ಪ್ರಭು ಚೌಹಾಣ್, ಇಂದು ಬೆಂಗಳೂರಿನ ಸುದೀಪ್ ಅವರ ನಿವಾಸದಲ್ಲಿ ರಾಯಭಾರಿ‌ ನೇಮಕಾತಿ ಪತ್ರ ನೀಡಿ ಸನ್ಮಾನಿಸಿದರು.

ನೇಮಕಾತಿ ಪತ್ರವನ್ನು ಸ್ವೀಕರಿಸಿ ಮಾತನಾಡಿದ ಸುದೀಪ್, ಇದೇ ವೇಳೆ 31 ಗೋವುಗಳನ್ನು ದತ್ತು ಪಡೆವುದಾಗಿ ಅವರು ತಿಳಿಸಿದರು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ಸರ್ಕಾರಿ ಗೋಶಾಲೆಗಳಿಂದ ಗೋವುಗಳನ್ನು ದತ್ತು ಪಡೆಯಲು‌ ನಿರ್ಧಾರ ಮಾಡಿರುವುದಾಗಿ ಸುದೀಪ್ ತಿಳಿಸಿದ್ದಾರೆ. ಪ್ರತಿ ಜಿಲ್ಲೆಗೆ ಒಂದರಂತೆ 31 ಗೋವುಗಳನ್ನು ಅವರು ದತ್ತು ಪಡೆಯಲಿದ್ದಾರೆ.

ಇದನ್ನೂ ಓದಿ: 

ಸುದೀಪ್ ಅವರು ಸರಕಾರದ ಕಾರ್ಯಕ್ರಮಗಳಿಗೆ ರಾಯಭಾರಿ ಆಗುತ್ತಿರುವುದು ಇದೇ ಮೊದಲೇನೂ ಅಲ್ಲ. ಈ ಹಿಂದೆಯೂ ಅವರು ಹಲವಾರು ಕಾರ್ಯಕ್ರಮಗಳ ಜೊತೆ ಕೈ ಜೋಡಿಸಿದ್ದಾರೆ. ಅಲ್ಲದೇ, ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿಯೂ ಅವರು ಸಹಕಾರಿ ಆಗಿದ್ದಾರೆ. ಈ ಸಲ ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿ ಆಗುವ ಮೂಲಕ ಪುಣ್ಯಕೋಟಿ ಉಳಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

19 hours ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

20 hours ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

20 hours ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

20 hours ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

20 hours ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

20 hours ago