ಕಿಡಿಗೇಡಿಗಳಿಗೆ ಹಿಂದೂ ಮುಸ್ಲಿಂ ಹೆಸರಿನಲ್ಲಿ ಗಲಭೆ ಸೃಷ್ಟಿಸಲು ಅವಕಾಶ ನೀಡಬಾರದು, ರಾಜ್ಯದಲ್ಲಿ ಭಯೋತ್ಪಾದಕ ತಡೆಗೆ ಎಲ್ಲರೂ ಒಂದಾಗಬೇಕು : ಈಶ್ವರಪ್ಪ -Vishwanews24

Featured, ರಾಜ್ಯ ನ್ಯೂಸ್

ಹಾಸನ: ಮಂಗಳೂರು ಬಾಂಬ್ ಪ್ರಕರಣದಲ್ಲಿ ಕಾಂಗ್ರೆಸ್, ಜೆಡಿಎಸ್ ಬಿಜೆಪಿ ಎನ್ನದೆ ಎಲ್ಲರೂ ಒಂದಾಗಬೇಕಿದೆ. ಎಲ್ಲರೂ ಒಂದಾಗದಿದ್ದರೆ ದುಷ್ಟ ಶಕ್ತಿಗಳಿಗೆ ಬೆಂಬಲ ಸಿಕ್ಕಂತಾಗಲಿದೆ ಎಂದು ಸಚಿವ ಈಶ್ವರಪ್ಪ ಹೇಳಿದ್ದಾರೆ.

ಮಂಗಳೂರು ಬಾಂಬ್ ಪ್ರಕರಣದಲ್ಲಿ ಕಾಂಗ್ರೆಸ್, ಜೆಡಿಎಸ್ ಬಿಜೆಪಿ ಎನ್ನದೆ ಎಲ್ಲರೂ ಒಂದಾಗಬೇಕಿದೆ, ಇಡೀ ರಾಜ್ಯವೇ ಒಂದಾಗಬೇಕಿದೆ. ರಾಜ್ಯದಲ್ಲಿ ದುಷ್ಟ ಶಕ್ತಿಗಳು ಪೌರತ್ವ ಕಾಯ್ದೆ ದುರುಪಯೋಗ ಮಾಡಿಕೊಂಡು ಗಲಭೆ ಮಾಡಲು ಯತ್ನಿಸುತ್ತಿವೆ. ಎಲ್ಲರೂ ಒಂದಾಗದಿದ್ದರೆ ದುಷ್ಟ ಶಕ್ತಿಗಳಿಗೆ ಬೆಂಬಲ ಸಿಕ್ಕಂತಾಗಲಿದೆ. ಪೊಲೀಸರು ಜೀವ ಒತ್ತೆಯಿಟ್ಟು ವ್ಯವಸ್ಥಿತವಾಗಿ ದುಷ್ಕೃತ್ಯ ಮಟ್ಟ ಹಾಕಲು ಮುಂದಾಗಿದ್ದಾರೆ ಎಂದು ಈಶ್ವರಪ್ಪ ಹೇಳಿದ್ದಾರೆ.

ಅಲ್ಲದೆ, ಕುಮಾರಸ್ವಾಮಿ, ಸಿದ್ದರಾಮಯ್ಯರನ್ನು ಪ್ರಾರ್ಥನೆ ಮಾಡುತ್ತೇನೆ, ಎಲ್ಲರೂ ಒಂದಾಗಿ ದುಷ್ಟರನ್ನು ಮಟ್ಟ ಹಾಕಲು ಯತ್ನಿಸಬೇಕು. ಕಿಡಿಗೇಡಿಗಳಿಗೆ ಹಿಂದೂ ಮುಸ್ಲಿಂ ಹೆಸರಿನಲ್ಲಿ ಗಲಭೆ ಸೃಷ್ಟಿಸಲು ಅವಕಾಶ ನೀಡಬಾರದು, ರಾಜ್ಯದಲ್ಲಿ ಭಯೋತ್ಪಾದಕ ತಡೆಗೆ ಎಲ್ಲರೂ ಒಂದಾಗಬೇಕೆಂದು ಸಚಿವ ಈಶ್ವರಪ್ಪ ಕರೆ ನೀಡಿದ್ದಾರೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292