ಬೆಳಗಾವಿ: ಜಿಲ್ಲೆಯ ಭೂತರಾಮನಹಟ್ಟಿಯ ಕಿತ್ತೂರುರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ 19 ಜಿಂಕೆಗಳು ಅಸಹಜವಾಗಿ ಸಾವನ್ನಪ್ಪಿರುವ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕಳವಳ ವ್ಯಕ್ತಪಡಿಸಿದ್ದು, ತನಿಖೆಗೆ ಆದೇಶಿಸಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಪ್ರಾಥಮಿಕ ವರದಿಗಳ ಪ್ರಕಾರ ಜಿಂಕೆಗಳು ಸಾಂಕ್ರಾಮಿಕ ಕಾಯಿಲೆಯಿಂದ ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಹೀಗಾಗಿ ಮೃಗಾಲಯದ ಬೇರೆ ಯಾವುದೇ ಪ್ರಾಣಿಗಳಿಗೂ ಸೋಂಕು ತಗುಲದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಇನ್ನೂ ಈ ಜಿಂಕೆಗಳು ಕಲುಷಿತ ನೀರು, ಆಹಾರ ಸೇವಿಸಿ ಕಾಯಿಲೆಗೆ ತುತ್ತಾಗಿ ಮೃತಪಟ್ಟಿವೆಯೇ ಅಥವಾ ಬೆಕ್ಕು ಹಾಗೂ ಇನ್ನಿತರ ಸಾಕು ಪ್ರಾಣಿಗಳಿಂದ ಈ ಕಾಯಿಲೆ ಹರಡಿದೆಯೇ ಎಂಬ ಬಗ್ಗೆ ತಜ್ಞರ ಸಮಿತಿ ರಚಿಸಿ, ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.
ಮೃಗಾಲಯದಲ್ಲಿರುವ ಪ್ರಾಣಿಗಳು ಈ ರೀತಿ ಸಾವಿಗೀಡಾಗುವುದು ಆತಂಕದ ವಿಚಾರವಾಗಿದ್ದು, ಇನ್ನು ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಮತ್ತು ಸಿಬ್ಬಂದಿಯ ನಿರ್ಲಕ್ಷ್ಯವಿದ್ದಲ್ಲಿ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳುವಂತೆಯೂ ಆದೇಶ ನೀಡಿದ್ದಾರೆ.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…