ಕಿನ್ನಿಗೋಳಿ : ಬೈಕ್ ಸವಾರನೋರ್ವ ಪೆಟ್ರೋಲ್ ಬಂಕ್ ಬಳಿ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾರಿ ಮಧ್ಯೆ ಸಾವನ್ನಪ್ಪಿದ ಘಟನೆ ಮಂಗಳೂರಿನ ಕಿನ್ನಿಗೋಳಿ ಸಮೀಪದ ಪಕ್ಷಿಕೆರೆಯ ಕೊಯಿಕುಡೆ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
ಮೃತ ಬೈಕ್ ಸವಾರನನ್ನು ಕೋಲ್ನಾಡು ಸಸಿತೋಟ ನಿವಾಸಿ ಶರತ್ ಶೆಟ್ಟಿ (49) ಎಂದು ಗುರುತಿಸಲಾಗಿದೆ.
ಮೃತ ಶರತ್ ಶೆಟ್ಟಿ ಹಳೆಯಂಗಡಿಯ ಸಂಸ್ಥೆಯೊಂದರಲ್ಲಿ ಚಾಲಕನಾಗಿ ದುಡಿಯುತ್ತಿದ್ದು ಕೆಲಸ ಮುಗಿಸಿ ವಾಪಸ್ ಬರುವ ವೇಳೆ ಪಕ್ಷಿಕೆರೆ ಕೊಯಿಕುಡೆ ಪೆಟ್ರೋಲ್ ಬಂಕ್ ಬಳಿ ವಿರುದ್ಧ ದಿಕ್ಕಿನಿಂದ ಬಂದ ಆಟೋಗೆ ಡಿಕ್ಕಿ ಹೊಡೆದಿದ್ದಾರೆ. ಅಪಘಾತದ ರಭಸಕ್ಕೆ ಶರತ್ ಶೆಟ್ಟಿಯವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ.
ತೀರ್ಮಾನಗಳಲ್ಲಿ ಎಚ್ಚರ 🌐 ನೋಡಿ ಇಂದಿನ ದಿನ ಭವಿಷ್ಯ -Vishwanews24
ಅಪಘಾತದಿಂದ ಆಟೋ ಹಾಗೂ ಬೈಕ್ ಜಖಂಗೊಂಡಿದೆ. ಮೃತ ಶರತ್ ಕೊಲ್ನಾಡು ಸಸಿತೋಟ ನಿವಾಸಿಯಾಗಿದ್ದು, ಪಕ್ಷಿಕೆರೆಯಲ್ಲಿ ಪ್ಲಾಟ್‌ನಲ್ಲಿ ವಾಸವಿದ್ದರು, ಈ ಹಿಂದೆ ಮುಂಬೈನಲ್ಲಿ ವಾಸ್ತವ್ಯವಿದ್ದು ಇತ್ತೀಚೆಗಷ್ಟೇ ಊರಿನಲ್ಲಿ ನೆಲೆಸಿದ್ದರು.
ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಈ ಬಗ್ಗೆ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…