Featured

ಕಿನ್ನಿಗೋಳಿ : ಪಕ್ಷಿಕೆರೆ ಹರಿಪಾದೆ ಜಾರಂದಾಯ ಕ್ಷೇತ್ರಕ್ಕೆ ಭೇಟಿ ಪ್ರಾರ್ಥನೆ ಸಲ್ಲಿಸಿದ ತಮಿಳು ಚಿತ್ರನಟ ವಿಶಾಲ್‌ – vishwanews24

ಕಿನ್ನಿಗೋಳಿ : ಪಕ್ಷಿಕೆರೆ ಹರಿಪಾದೆ ಜಾರಂದಾಯ ಕ್ಷೇತ್ರಕ್ಕೆ ಭೇಟಿ ಪ್ರಾರ್ಥನೆ ಸಲ್ಲಿಸಿದ ತಮಿಳು ಚಿತ್ರನಟ ವಿಶಾಲ್‌

ಕಿನ್ನಿಗೋಳಿ: ಅನಾರೋಗ್ಯದಿಂದ ಬಳಲುತ್ತಿರುವ ಖ್ಯಾತ ತಮಿಳು ಚಿತ್ರನಟ ವಿಶಾಲ್‌ ಅವರು ಬುಧವಾರ ಪಕ್ಷಿಕೆರೆ ಸಮೀಪದ ಹರಿಪಾದೆ ಜಾರಂದಾಯ ಕ್ಷೇತ್ರಕ್ಕೆ ಭೇಟಿ ನೀಡಿದ್ದು, ಈ ವೇಳೆ ಅವರ ಆರೋಗ್ಯ ಸುಧಾರಿಸಲಿದೆ ಎಂಬ ಅಭಯ ವನ್ನು ದೈವ ನೀಡಿದೆ. ವಿಶಾಲ್‌ ಅವರು ಮುಂದಿನ ವರ್ಷ ಬಂದು ತುಲಾಭಾರ ಸೇವೆ ಸಲ್ಲಿಸುವುದಾಗಿ ಹರಕೆ ಹೊತ್ತಿದ್ದಾರೆ.

ಕಳೆದ ಜನವರಿಯಲ್ಲಿ ಚೆನ್ನೈಯಲ್ಲಿ ನಡೆದ ಮದಗಜ ರಾಜ ಸಿನೆಮಾದ ಪತ್ರಿಕಾಗೋಷ್ಠಿಯಲ್ಲಿ ಮೈಕ್‌ ಕೈಯಲ್ಲಿ ಹಿಡಿಯಲಾಗದಷ್ಟು ಸೋತುಹೋಗಿದ್ದರು. ಮಾತನಾಡಲೂ ಅಗುತ್ತಿರಲಿಲ್ಲ. ವೈರಲ್‌ ಫಿವರ್‌ನಿಂದ ಹೀಗಾಗಿದೆ ಎಂದು ಹೇಳಿದ್ದರೂ ಅವರ ಆರೋಗ್ಯ ಹದಗೆಟ್ಟ ಬಗ್ಗೆ ವರದಿಗಳಿದ್ದವು.

ಈ ನಡುವೆ ಮಂಗಳವಾರ ಅವರು ಕೊಲ್ಲೂರು ಮತ್ತು ಉಡುಪಿ ದೇಗುಲಕ್ಕೆ ಭೇಟಿ ನೀಡಿದ್ದರು. ಇದರ ನಡುವೆ ಅವರು ಕಾರಣಿಕ ದೈವವೆಂದೇ ಹೆಸರಾದ ಪಕ್ಷಿಕೆರೆ ಹರಿಪಾದೆಯ ಜಾರಂದಾಯ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು ಎಂದು ಕ್ಷೇತ್ರದ ವ್ಯವಸ್ಥಾಪಕ ಅಶ್ವಿ‌ನ್‌ ಶೇಖ್‌ ತಿಳಿಸಿದ್ದಾರೆ.

ಪ್ರಾರ್ಥನೆ ಸಲ್ಲಿಸಿದ ವಿಶಾಲ್‌

ವಿಶಾಲ್‌ ಮಂಗಳವಾರ ರಾತ್ರಿ ಸುಮಾರು 10.30ರ ಹೊತ್ತಿಗೆ ಕುಟುಂಬ ಸಮೇತ ದೈವಸ್ಥಾನಕ್ಕೆ ಆಗಮಿಸಿದರು. ಅಷ್ಟು ಹೊತ್ತಿಗೆ ಕ್ಷೇತ್ರದಲ್ಲಿ ಗಗ್ಗರ ಸೇವೆಗೆ ಅಣಿಯಾಗುತ್ತಿತ್ತು. ಕೈಯಲ್ಲಿ ಮಲ್ಲಿಗೆ ಚೆಂಡು ಹಿಡಿದಿದ್ದ ವಿಶಾಲ್‌ ಅವರು ಭಕ್ತಿಯಿಂದ ಗಗ್ಗರ ಸೇವೆಯನ್ನು ವೀಕ್ಷಿಸಿದರು. ಬಳಿಕ ಅವರನ್ನು ಕೊಡಿಯಡಿಗೆ ಕರೆಯಲಾಯಿತು. ಈ ವೇಳೆ ಅವರು ತಮ್ಮ ಆರೋಗ್ಯ ವೃದ್ಧಿಗಾಗಿ ಅನುಗ್ರಹ ಕೋರಿ ಬಂದಿರುವುದಾಗಿ ಹೇಳಿ ಆಶೀರ್ವಾದ ಬಯಸಿದರು. ಈ ನಡುವೆ ದೈವ‌ ಜೀಟಿಗೆ ಮರ್ಯಾದೆಯೊಂದಿಗೆ ಅಭಯ ನೀಡಿತು.

ಇತ್ತ ಅರ್ಚಕರು, ಕ್ಷೇತ್ರದ ತುಲಾಭಾರ ಸೇವೆಯು ಭಾರಿ ಕಾರಣಿಕದ್ದಾಗಿದ್ದು, ನೀವು ಆರೋಗ್ಯವಂತರಾಗಿ ಬಂದು ಮುಂದಿನ ವರ್ಷ ತುಲಾಭಾರ ಸೇವೆ ಕೊಡಿಸಿ ಎಂದು ಸಲಹೆ ನೀಡಿದರು. ವಿಶಾಲ್‌ ಅವರು ಅದಕ್ಕೆ ಒಪ್ಪಿ ಮುಂದಿನ ವರ್ಷ ಬರುವುದಾಗಿ ಹೇಳಿದರು. ರಾತ್ರಿ ಸುಮಾರು 1 ಗಂಟೆ ಹೊತ್ತಿಗೆ ಅವರು ನಿರ್ಗಮಿಸಿದರು. ವಿಶಾಲ್‌ ಬುಧವಾರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

Vishwa News 24

Recent Posts

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

2 minutes ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

2 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

2 hours ago

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

22 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

24 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

24 hours ago