ಕಿನ್ನಿಗೋಳಿ ಪಟ್ಟಣ ಪಂಚಾಯತ್ ಚುನಾವಣೆ : ಬಿಜೆಪಿ ಗೆಲುವು – vishwanews24
ಕಿನ್ನಿಗೋಳಿ ಪಟ್ಟಣ ಪಂಚಾಯತ್ ಚುನಾವಣೆ : ಬಿಜೆಪಿ ಗೆಲುವು
ಮುಲ್ಕಿ: ಕಿನ್ನಿಗೋಳಿ ಪಟ್ಟಣ ಪಂಚಾಯತ್ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಗೆಲುವು ಸಾಧಿಸಿದೆ.
ಒಟ್ಟು 18 ಕ್ಷೇತ್ರಗಳನ್ನು ಹೊಂದಿರುವ ಕಿನ್ನಿಗೋಳಿ ಪಟ್ಟಣ ಪಂಚಾಯತ್ ನಲ್ಲಿ ಬಿಜೆಪಿಗೆ 10 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ ಕಾಂಗ್ರೆಸ್ 8 ಕ್ಷೇತ್ರಗಳಲ್ಲಿ ಜಯ ಗಳಿಸಿದೆ.
ಕಿನ್ನಿಗೋಳಿ ಪಟ್ಟಣ ಪಂಚಾಯತ್ ಆಗಿ ಮೇಲ್ದರ್ಜೆಗೇರಿದ ನಾಲ್ಕು ವರ್ಷಗಳ ಬಳಿಕ ಡಿಸೆಂಬರ್ 21ರಂದು ಪ್ರಥಮ ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸುವಲ್ಲಿ ಯಶಸ್ವಿಯಾಗಿದೆ.
ಬಳ್ಳಾರಿ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ; ಒಂದೇ ಕುಟುಂಬದ ಮೂವರು ಸಾವು – vishwanews24
