Featured

ಕಿನ್ನಿಗೋಳಿ, ಬಜಪೆ ಪ.ಪಂ ಚುನಾವಣೆ: ಬಿಜೆಪಿ ಗೆಲುವು ಮೋದಿ ಜನಪರ ಆಡಳಿತದ ಪರವಾಗಿ ಸಂದ ಜಯ : ಸಂಸದ ಕ್ಯಾ. ಚೌಟ – vishwanews24

ಕಿನ್ನಿಗೋಳಿ, ಬಜಪೆ ಪ.ಪಂ ಚುನಾವಣೆ: ಬಿಜೆಪಿ ಗೆಲುವು ಮೋದಿ ಜನಪರ ಆಡಳಿತದ ಪರವಾಗಿ ಸಂದ ಜಯ : ಸಂಸದ ಕ್ಯಾ. ಚೌಟ

ಮಂಗಳೂರು : ಕಿನ್ನಿಗೋಳಿ ಹಾಗೂ ಬಜಪೆ ಪಟ್ಟಣ ಪಂಚಾಯತ್‌ಗಳ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಸ್ಪಷ್ಟ ಬಹುಮತದೊಂದಿಗೆ ಭರ್ಜರಿ ಗೆಲುವು ದಾಖಲಿಸಿರುವುದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಚಿಂತನೆ, ಜನಪರ ಕಾಳಜಿ ಹಾಗೂ ಹಿಂದುತ್ವದ ವಿಚಾರಧಾರೆಯ ಪರವಾಗಿ ಸಂದ ಜಯ. ಈ ಹಿನ್ನಲೆಯಲ್ಲಿ ಮತದಾರರಿಗೆ ನನ್ನ ವಿಶೇಷ ಧನ್ಯವಾದಗಳು ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.

ಚುನಾವಣಾ ಫಲಿತಾಂಶದ ಕುರಿತು ಹರ್ಷ ವ್ಯಕ್ತಪಡಿಸಿರುವ ಸಂಸದರು, “ಈ ಫಲಿತಾಂಶವು ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಹಿಂದೂ ವಿರೋಧಿ ನೀತಿಗಳಿಗೆ ಜನತೆ ನೀಡಿದ ಸ್ಪಷ್ಟವಾದ ಉತ್ತರವಾಗಿದೆ. ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಹತ್ತಿರದಿಂದ ಕಂಡ ಜನತೆ ಬಿಜೆಪಿಯ ಸಿದ್ಧಾಂತಕ್ಕೆ ಮನ್ನಣೆ ನೀಡಿದ್ದಾರೆ. ಆ ಮೂಲಕ ಸ್ಥಳೀಯ ಆಡಳಿತದಿಂದ ಹಿಡಿದು, ರಾಜ್ಯ – ರಾಷ್ಟ್ರ ಮಟ್ಟದಲ್ಲೂ ಬಿಜೆಪಿಗೆ ಅಭೂತಪೂರ್ವ ಜನಾದೇಶ ವ್ಯಕ್ತವಾಗುತ್ತಿರುವುದು ಪ್ರಧಾನಿ ಮೋದಿಯವರ ವಿಕಸಿತ ಭಾರತಕ್ಕೆ ಸಂಕಲ್ಪಕ್ಕೆ ಮತ್ತಷ್ಟು ಸ್ಫೂರ್ತಿ ತುಂಬಿದೆ ಎಂದು ಹೇಳಿದ್ದಾರೆ.

ಈ ಗೆಲುವಿನ ಹಿಂದೆ ಅಹರ್ನಿಶಿಯಾಗಿ ಶ್ರಮಿಸಿದ ಸಮಸ್ತ ಕಾರ್ಯಕರ್ತ ಬಂಧುಗಳಿಗೆ, ಮೂಲ್ಕಿ – ಮೂಡುಬಿದ್ರೆ ಕ್ಷೇತ್ರದ ಶಾಸಕರಾದ ಶ್ರೀ ಉಮಾನಾಥ ಕೋಟ್ಯಾನ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಮಂಡಲ ಅಧ್ಯಕ್ಷರಾದ ದಿನೇಶ್ ಪುತ್ರನ್, ಎಲ್ಲಾ ಪದಾಧಿಕಾರಿಗಳು ಹಾಗೂ ಪಾರ್ಟಿಯ ಎಲ್ಲಾ ಪ್ರಮುಖರಿಗೆ ಅಭಿನಂದನೆಗಳು ಮತ್ತು ಧನ್ಯವಾದಗಳನ್ನು ಸಲ್ಲಿಸುವುದಾಗಿ ಕ್ಯಾ. ಚೌಟ ತಿಳಿಸಿದ್ದಾರೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

10 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

11 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

13 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

13 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

14 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

14 hours ago