ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಒಂದೇ ವೇಲ್ನಲ್ಲಿ ಕಟ್ಟಿ ತುಂಗಭದ್ರಾ ಕಾಲುವೆಗೆ ಎಸೆದು, ಬಳಿಕ ತಾನೂ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬಳ್ಳಾರಿ ನಗರದ ಅಲ್ಲಿಪುರ ಬಳಿಯ ತುಂಗಭದ್ರಾ ಕಾಲುವೆ ಬಳಿ ನಡೆದಿದೆ.
ಬಳ್ಳಾರಿ ನಗರದ ಮಿಲ್ಲರ್ ಪೇಟೆ ನಿವಾಸಿ ಲತೀಪಾ ಸಿಮ್ರಾನ್ (29) ಹಾಗೂ ಅವರ ಮಕ್ಕಳಾದ ಮಹಮ್ಮದ್ ಅಯಾನ್ (3) ಮತ್ತು ಆಯಿಷಾ ಫಾತಿಮಾ (2) ಮೃತ ದುರ್ದೈವಿಗಳು.
ನಿನ್ನೆ ಸಂಜೆ ಲತೀಪಾ ಸಿಮ್ರಾನ್ ಮಕ್ಕಳನ್ನು ಒಂದೇ ವೇಲ್ಗೆ ಕಟ್ಟಿ ಕಾಲುವೆಗೆ ಎಸೆದು, ಬಳಿಕ ತಾನೂ ಕಾಲುವೆಗೆ ಹಾರಿದ್ದಾರೆ.
ಇದನ್ನೂ ಓದಿ:
ಇಂದು ಬೆಳಗ್ಗೆ ಲತೀಪಾ ಸಿಮ್ರಾನ್ ಅವರ ಮೃತದೇಹ ಪತ್ತೆಯಾಗಿತ್ತು. ಬಳಿಕ ಕರ್ನಾಟಕದ ಗಡಿಭಾಗದ ನಾಗಲಾಪುರ ಬಳಿ ಇಬ್ಬರು ಮಕ್ಕಳ ಮೃತದೇಹಗಳು ಪತ್ತೆಯಾಗಿವೆ.
ಲತೀಪಾ ಸಿಮ್ರಾನ್ ಅವರ ಸಾವಿಗೆ ಪತಿಯ ಕಿರುಕುಳವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಪತಿ ಸದ್ದಾಂ ಹುಸೇನ್ ವರದಕ್ಷಿಣೆ ತರುವಂತೆ ಒತ್ತಾಯಿಸಿ, ನಿತ್ಯ ಹಲ್ಲೆ ನಡೆಸುವುದರ ಜೊತೆಗೆ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿದ್ದ ಎಂದು ಕುಟುಂಬಸ್ಥರು ದೂರಿದ್ದಾರೆ.
ಮಕ್ಕಳು ಬದುಕಿದ್ದರೆ ಅವರಿಗೂ ಕಿರುಕುಳ ನೀಡಬಹುದು ಎಂಬ ಆತಂಕದಿಂದ ಲತೀಪಾ ಸಿಮ್ರಾನ್ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.
ಇದನ್ನೂ ಓದಿ:
ಘಟನೆಗೆ ಸಂಬಂಧಿಸಿದಂತೆ ಮೃತ ಮಹಿಳೆಯ ಪತಿ ಸದ್ದಾಂ ಹುಸೇನ್ ಸೇರಿದಂತೆ ಆರು ಜನರ ವಿರುದ್ಧ ಬಳ್ಳಾರಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…
ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…