Featured

ಕುಂದಗೋಳ ಉಪ ಚುನಾವಣೆ: ಪ್ರಚಾರದ ವೇಳೆ ಡಿ.ಕೆ‌ ಶಿವಕುಮಾರ್ ಕಣ್ಣೀರು -Vishwanews24

ಹುಬ್ಬಳ್ಳಿ: ಕುಂದಗೋಳ ಕ್ಷೇತ್ರದ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್​​ ಪಕ್ಷದ ಮುಖಂಡರು ಭರ್ಜರಿ ಪ್ರಚಾರ ನಡೆಸುತ್ತಿದ್ದು, ಈ ವೇಳೆ ಜಲಸಂನ್ಮೂಲ ಸಚಿವ ಡಿ.ಕೆ ಶಿವಕುಮಾರ್ ದಿವಗಂತ ಸಿ.ಎಸ್​ ಶಿವಳ್ಳಿ ಅವರನ್ನು ನೆನೆದು ಕಣ್ಣೀರು ಹಾಕಿದ್ದಾರೆ.
ಇಂದು ಇಂಗಳಗಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಶಿವಳ್ಳಿ ಅವರ ಪರ ಪ್ರಚಾರ ನಡೆಸಿದ ಡಿಕೆಶಿ, ಶಿವಳ್ಳಿ ಅವರು ಜಾತಿ ನೋಡದೆ ಎಲ್ಲರ ಸೇವೆ ಮಾಡಿದರು. ಕೊನೆಯವರೆಗೂ ಬಡವರ ಪರ ಕೆಲಸ ಮಾಡಿದರು. ನಿಮ್ಮ ಮುಂದೆ ನಿಂತು ಮತಯಾಚನೆ ಮಾಡುತ್ತಿದ್ದೇನೆ. ಇದು ಶಿವಳ್ಳಿ ಚುನಾವಣೆಯಲ್ಲ. ನಿಮ್ಮ ಚುನಾವಣೆ. ನಿಮ್ಮೆಲ್ಲರ ಪಾದಗಳಿಗೆ ನಮಸ್ಕಾರ ಮಾಡುತ್ತೇನೆ. ಶಿವಳ್ಳಿಯನ್ನು ಉಳಿಸಿಕೊಳ್ಳಿ ಎಂದು ಅಳುತ್ತಲೇ ಹೇಳಿದರು.
ಶಿವಳ್ಳಿ ಅವರ ನಿಧನದ ನಂತರ ಕುಸುಮಕ್ಕ ನಮ್ಮ ಮನೆಗಾಗಲಿ, ದಿನೇಶ್​ ಗುಂಡೂರಾವ್​ ಅವರ ಮನೆಗಾಗಲೀ ಬಂದು ಚುನಾವಣೆಯಲ್ಲಿ ಸೀಟು ಕೊಡಿ ಎಂದು ಕೇಳಲಿಲ್ಲ. ಕಾರ್ಯಕರ್ತರೇ ನಿರ್ಧರಿಸಿದ್ದಾರೆ. ಕುಸುಮಕ್ಕನನ್ನು ಗೆಲ್ಲಿಸಿಕೊಡಿ ,ಅವಳನ್ನು ನಿಮ್ಮ ಮಡಿಲಿಗೆ ಹಾಕಿದ್ದೇನೆ ಎಂದು ಅವರು ಭಾವುಕರಾದರು.
ನನ್ನ ಕ್ಷೇತ್ರವನ್ನು ಹೇಗೆ ನೋಡಿಕೊಳ್ಳುತ್ತಿದ್ದೇನೋ, ಹಾಗೇ ಕುಂದಗೋಳವನ್ನೂ ನೋಡಿಕೊಳ್ಳುತ್ತೇನೆ. ಈಗ ಚುನಾವಣೆ ಬಂದಿದೆ ವೋಟು ಕೊಡಿ ಎಂದು ಕಣ್ಣಿರು ಹಾಕಿಲ್ಲ, ಬದಲಿಗೆ ನನಗೆ ತುಂಬಾ ಹತ್ತಿರವಾದ ಗೆಳೆಯ ಅವನು. ಶಿವಳ್ಳಿ ಕಳೆದು ಕೊಂಡು ನನಗೆ ನೋವಾಗಿದೆ ಹೀಗಾಗಿ ನನಗೆ ಅಳು ಬಂದಿದೆ  ಎಂದು ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಹೇಳಿದರು.
Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago