Featured

ಹಿಟ್ ಎಂಡ್ ರನ್ : ಕುಂದಾಪುರದಲ್ಲಿ ಅಪಘಾತದ ತೀವ್ರತೆಗೆ ಪಾದಾಚಾರಿ ಸಾವು

ಕುಂದಾಪುರ, : ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಯೊಬ್ಬರಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಆತ ಸ್ಥಳದಲ್ಲೇ ಸಾವನಪ್ಪಿದ ಘಟನೆ ಘಟನೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಉಪ್ಪುಂದ ಸಮೀಪದ ನಾಯ್ಕನಕಟ್ಟೆ ಎಂಬಲ್ಲಿ ಜು 31 ರ ಮಂಗಳವಾರ ರಾತ್ರಿ ನಡೆದಿದೆ. ಅಪಘಾತದಲ್ಲಿ ಸಾವನ್ನಪ್ಪಿದ ಪಾದಾಚಾರಿ ವ್ಯಕ್ತಿಯನ್ನು ಹೇರಂಜಾಲು ನಿವಾಸಿ ಬಾಬು ಗಾಣಿಗ ಎಂದು ಗುರುತಿಸಲಾಗಿದೆ.

ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ಬಾಬು ಗಾಣಿಗ ಕೆಲಸ ಮುಗಿಸಿ ನಾಯ್ಕನಕಟ್ಟೆಗೆ ಬಂದಿದ್ದರು. ನಾಯಕ್ನಕಟ್ಟೆ ಪೇಟೆಯಲ್ಲಿ ಸಾಮಾನು ಖರೀದಿಸಿ ರಾತ್ರಿ ಮನೆಗೆ ಹೋಗಲೆಂದು ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು ಎನ್ನಲಾಗಿದೆ. ಇದೇ ಸಂದರ್ಭ ಹೆದ್ದಾರಿಯಲ್ಲಿ ಬಂದ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾಗಿದೆ. ಅಪಘಾತದ ತೀವ್ರತೆಗೆ ಗಂಭೀರ ಗಾಯಗೊಂಡ ಬಾಬು ಗಾಣಿಗ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಪಘಾತ ನಡೆದು ಸಾಕಷ್ಟು ಸಮಯವಾದರೂ ಸಾವಿಗೀಡಾದ ವ್ಯಕ್ತಿಯ ಪರಿಚಯ ಸಿಕ್ಕಿರಲಿಲ್ಲ ಎನ್ನಲಾಗಿದೆ. ಅದೂ ಅಲ್ಲದೇ ರಾತ್ರಿ ವೇಳೆಯಾಗಿದ್ದರಿಂದ ಮುಖದ ಗುರುತು ಸಿಕ್ಕಿರಲಿಲ್ಲ ಎನ್ನಲಾಗಿದೆ. ಬೈಂದೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

2 days ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

2 days ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

2 days ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

2 days ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

3 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

3 days ago