Featured

ಕುಂದಾಪುರದ ರಸ್ತೆ ಅಭಿವೃದ್ಧಿಗಾಗಿ 30 ಕೋ.ರೂ. ವಿಶೇಷ ಅನುದಾನ ಮಂಜೂರು ಮಾಡಬೇಕು  : ಹಾಲಾಡಿ -Vishwanews24

ಕುಂದಾಪುರದ ರಸ್ತೆ ಅಭಿವೃದ್ಧಿಗಾಗಿ 30 ಕೋ.ರೂ. ವಿಶೇಷ ಅನುದಾನ ಮಂಜೂರು ಮಾಡಬೇಕು  : ಹಾಲಾಡಿ -Vishwanews24

ಉಡುಪಿ : ಕುಂದಾಪುರ ವಿಧಾನಸಭಾ ಕ್ಷೇತ್ರದ ಪ್ರಮುಖ ರಸ್ತೆಗಳಗಳ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳು 30 ಕೋ.ರೂ.ವಿಶೇಷ ಅನುದಾನ ಮಂಜೂರು ಮಾಡಬೇಕು ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ತಿಳಿಸಿದ್ದಾರೆ.

ಕೋಟೇಶ್ವರ-ಸೋಮೇಶ್ವರ ಜಿಲ್ಲಾ ಮುಖ್ಯ ರಸ್ತೆಯ ಹೊಂಬಾಡಿಯಿಂದ ಹಾಲಾಡಿವರೆಗೆ ಭೂಸ್ವಾಧೀನ ಸೇರಿದಂತೆ ರಸ್ತೆ ವಿಸ್ತರಣೆ ಮತ್ತು ಅಭಿವೃದ್ಧಿಗೆ 15 ಕೋ.ರೂ. ಹಾಗೂ ಬ್ರಹ್ಮಾವರ-ಜನ್ನಾಡಿ ಜಿಲ್ಲಾ ಮುಖ್ಯ ರಸ್ತೆಯ ಬಾರ್ಕೂರು ಪೇಟೆಯಿಂದ ಹಳ್ಳಾಡಿವರೆಗೆ ಭೂಸ್ವಾಧೀನ ಸೇರಿದಂತೆ ರಸ್ತೆ ವಿಸ್ತರಣೆ ಮತ್ತು ಅಭಿವೃದ್ಧಿಗೊಳಿಸಲು 15 ಕೋ.ರೂ.ಅಗತ್ಯವಿದೆ ಎಂದು ಈ ವೇಳೆ ತಿಳಿಸಿದ್ದಾರೆ

ಕುಂದಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿ ಯಲ್ಲಿ ಭೂಸ್ವಾಧೀನ ಮಾಡಿ ರಸ್ತೆ ಅಗಲೀಕರಣ ಮಾಡುವುದಕ್ಕೆ ನನ್ನ ಸಂಪೂರ್ಣ ಸಹಕಾರವಿದೆ. ಪಂಚಾಯತ್ ಅಧ್ಯಕ್ಷರ ನಿರ್ಣಯದ ಪ್ರಕಾರ ನಾನು ಬದ್ಧನಾಗಿ ಜನಪರ ಕೆಲಸ ಮಾಡಿದ್ದೇನೆ. ಭೂಸ್ವಾಧೀನ ಮಾಡಿಕೊಂಡು ಭೂ ಸಂತ್ರಸ್ತರಿಗೆ ಪರಿಹಾರ ಕೊಟ್ಟು ರಸ್ತೆ ವಿಸ್ತರಣೆ ಮಾಡಲಿ. ಇಲ್ಲದಿದ್ದರೆ ಜನ ಸಾಮಾನ್ಯರಿಗೆ ಕಷ್ಟ ಆಗುತ್ತದೆ ಎಂದು ಹೇಳಿದ್ದೆ. ಈ ಬಗ್ಗೆ 2013 ರಿಂದ ವಿಧಾನ ಸಭೆಯಲ್ಲಿ ಪ್ರಶ್ನಿಸುತ್ತಿದ್ದೇನೆ. ಸರಕಾರ ಇದರ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.

ದೇಶದ ರೈತರ ಹಿತಾಸಕ್ತಿ ಕಾಪಾಡುವುದಕ್ಕಾಗಿ ಕೇಂದ್ರ ಸರಕಾರ ಮೂರು ಕೃಷಿ ಕಾಯ್ದೆಯ ಬಗ್ಗೆ ಸಾಕಷ್ಟು ವಿಮರ್ಶೆಗೆ ಒಳಪಡಿಸಿ ಈಗ ಹಿಂದೆಗೆದುಕೊಂಡಿದೆ. ಉಳಿದಂತೆ ಕೇಂದ್ರ ಸರಕಾರದ ಈ ನಿರ್ಧಾರದ ಬಗ್ಗೆ ಮಾತನಾಡುವಷ್ಟು ದೊಡ್ಡ ವ್ಯಕ್ತಿ ನಾನಲ್ಲ ಎಂದು ಹೇಳಿದ್ದಾರೆ

ಸರಕಾರದ ಕಾಯ್ದೆ, ಕಾನೂನಿಗೆ ಕೆಲವೊಮ್ಮೆ ವಿರೋಧ, ಪರವಾಗಿ ಮಾತನಾಡುವುದು, ಅಸ್ಪಷ್ಟ ಮಾಹಿತಿಯಿಂದ ಪ್ರತಿಭಟಿಸುವುದು ಸಾಮಾನ್ಯ. ಈ ಬಗ್ಗೆ ರಾಷ್ಟ್ರೀಯ ಮಟ್ಟದಲ್ಲಿ ತಿಳುವಳಿಕೆ ಪಡೆದು ಕೊಂಡು ವಿಮರ್ಶೆ ನಡೆಸಿ ಕೇಂದ್ರ ಸರಕಾರ ಒಳ್ಳೆಯ ನಿರ್ಧಾರ ತೆಗೆದುಕೊಂಡಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಮ್ಮಲ್ಲಿ ಸದ್ಯ ಮತದಾರರು ಪಟ್ಟಣ ಪಂಚಾಯತ್, ಪುರಸಭೆ, ಗ್ರಾ.ಪಂ.ಸದಸ್ಯರು ಮಾತ್ರ ಇದ್ದಾರೆ. ಇವರೆಲ್ಲ ಪಕ್ಷದ ನೆಲೆಯಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದವರಲ್ಲ. ರಾಜಕೀಯ ಪಕ್ಷ ಬೆಂಬಲಿತರಾಗಿದ್ದಾರೆ. ಮತದಾರರು ಅಭಿವೃದ್ದಿ ನೋಡಿ ನಿರ್ಣಯ ತೆಗೆದುಕೊಳ್ಳುತ್ತಾರೆ ಎಂದಿದ್ದಾರೆ.

Vishwa News 24

Recent Posts

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

13 hours ago

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ – vishwanews24

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ  ಸಂಭ್ರಮದ ನಡುವೆಯೇ…

14 hours ago

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ  – vishwanews24

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ   ಮಂಗಳೂರು:…

14 hours ago

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ – vishwanews24

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…

14 hours ago

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

2 days ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

2 days ago