Featured

ಕುಂದಾಪುರ:ನಿರಂತರ ನಡೆಯುತ್ತಿರುವ ಚಳವಳಿ ಲೆಕ್ಕಿಸದೆ ರೈತ ವಿರೋಧಿ ನೀತಿ ಅನುಸರಿಸುತ್ತಿದೆ : ಕಾಂಗ್ರೆಸ್ ಜನಧ್ವನಿ ಪಾದಯಾತ್ರೆಯಲ್ಲಿ ವಿನಯ ಕುಮಾರ್ ಸೊರಕೆ -Vishwanews24

ಕುಂದಾಪುರ:ನಿರಂತರ ನಡೆಯುತ್ತಿರುವ ಚಳವಳಿ ಲೆಕ್ಕಿಸದೆ ರೈತ ವಿರೋಧಿ ನೀತಿ ಅನುಸರಿಸುತ್ತಿದೆ : ಕಾಂಗ್ರೆಸ್ ಜನಧ್ವನಿ ಪಾದಯಾತ್ರೆಯಲ್ಲಿ ವಿನಯ ಕುಮಾರ್ ಸೊರಕೆ -Vishwanews24

ಕುಂದಾಪುರ: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರ ಸರಕಾರದ ಜನವಿರೋಧಿ ನಿಲುವಿನ ವಿರುದ್ಧ ಹೆಜಮಾಡಿಯಿಂದ ಬೈಂದೂರು ವರೆಗೆ ನಡೆಯುತ್ತಿರುವ ಜನಧ್ವನಿ ಪಾದಯಾತ್ರೆ ಇಂದು ಮಧ್ಯಾಹ್ನ ಸಾಲಿಗ್ರಾಮದಿಂದ ಹೊರಟ ಪಾದಯಾತ್ರೆ ಕೋಟ, ತೆಕ್ಕಟ್ಟೆ ಮೂಲಕ ಕುಂದಾಪುರ ತಲುಪಿದೆ.

ಕುಂದಾಪುರ ಶಾಸ್ತ್ರಿ ಸರ್ಕಲ್ ಬಳಿ ಪಾದಯಾತ್ರೆಯನ್ನುದ್ದೇಶಿಸಿ ಕಾಂಗ್ರೆಸ್ ಮುಖಂಡರಾದ ಸುಧೀರ್ ಕುಮಾರ್ ಮರವಳ್ಳಿ ಮಾತನಾಡಿ, ಪಾದಯಾತ್ರೆಯ ಉದ್ದೇಶ ತಿಳಿಸಿದರು. ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪಚಂದ್ರ ಶೆಟ್ಟಿ ಉಪಸ್ಥಿತರಿದ್ದರು.

ಕಾಪು ಹೊಸ ಮಾರಿಗುಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಮೇಶ್ ಹೆಗ್ಡೆಗೆ ಗುರ್ಮೆ ಸುರೇಶ್ ಶೆಟ್ಟಿಯಿಂದ ಗೌರವರ್ಪಣೆ -Vishwanews24

ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, ಕೇಂದ್ರ ಸರ್ಕಾರ ರೈತರ ಬೇಡಿಕೆ, ನಿರಂತರ ನಡೆಯುತ್ತಿರುವ ಚಳವಳಿ ಲೆಕ್ಕಿಸದೆ ರೈತ ವಿರೋಧಿ ನೀತಿ ಅನುಸರಿಸುತ್ತಿದೆ. ಹಿಂದೆ ಕಾಂಗ್ರೆಸ್ ಸರ್ಕಾರ ಬಡವರಿಗೆ ಅಕ್ರಮ ಸಕ್ರಮದ ಮೂಲಕ ಭೂಮಿ ನೀಡುವ ಕೆಲಸ ಮಾಡಿತ್ತು. ಆದರೆ, ಈ ಸರ್ಕಾರ ಸರ್ಕಾರಿ ಭೂಮಿಯಲ್ಲಿ ಕುಳಿತವರ ಮೇಲೂ ಕೇಸು ಹಾಕಲು ಮುಂದಾಗುತ್ತಿದೆ. ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರುತ್ತಲೇ ಇದೆ. ಗ್ಯಾಸ್ ಸಬ್ಸಿಡಿ ತೆಗೆದು ಹಾಕಲಾಗಿದೆ. ದಿನಬಳಕೆಯ ವಸ್ತುಗಳ ಬೆಲೆಯೂ ಗಗನಕ್ಕೇರುತ್ತಿದೆ. ಸರಕಾರಿ ಸ್ವಾಮ್ಯದ ಸಂಸ್ಥೆಗಳ ಖಾಸಗೀಕರಣವಾಗುತ್ತಿದೆ. ಕೊರೊನಾ ಬಿಕ್ಕಟ್ಟಿನಲ್ಲಿಯೂ ವಿಪರೀತ ಬೆಲೆ ಏರಿಕೆಯ ಹೊಡೆತ ಜನತೆಗೆ ಈ ಸರ್ಕಾರಗಳು ನೀಡುತ್ತಿವೆ ಎಂದರು.

ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದ ಮೆಟ್ರೋ ಮ್ಯಾನ್‌‌‌ ಖ್ಯಾತಿಯ ಇ . ಶ್ರೀಧರನ್‌‌ -Vishwanews24

ಕಾಂಗ್ರೆಸ್ ಅಧ್ಯಕ್ಷ ಎಚ್.ಹರಿಪ್ರಸಾದ್ ಶೆಟ್ಟಿ, ಮಾಜಿ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಶಂಕರ್ ಕುಂದರ್, ಎಂ.ಎ. ಗಫೂರ್,ಅಶೋಕ್ ಪೂಜಾರಿ,ಚಂದ್ರಶೇಖರ್ ಖಾರ್ವಿ ಪುರಸಭೆ ಸದಸ್ಯರು, ಕಿಶನ್ ಹೆಗ್ಡೆ ಕೊಳ್ಕೆಬೈಲು, ಒಲಿವೇರ, ವರೋನಿಕಾ ಕರ್ವೇಲ್ಲೊ, ದೇವಾನಂದ ಶೆಟ್ಟಿ, ಚಂದ್ರಶೇಖರ ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು.ಈ ಸಂದರ್ಭ ‘ರೈತರ ಭದ್ರತೆ- ದೇಶದ ಭದ್ರತೆ’ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು.

ಕಾಂಗ್ರೆಸ್‌ ‘ಸಂಘಟನೆಯ ಜತೆ ಬಲವರ್ಧನೆಗೆ ಮಾ. 3ರಿಂದ ಪಕ್ಷದ ಶಾಸಕರಿಲ್ಲದ 100 ಕ್ಷೇತ್ರಗಳಲ್ಲಿ ಪಾದಯಾತ್ರೆ: ಡಿ.ಕೆ. ಶಿವಕುಮಾರ್‌ -Vishwanews24

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

5 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

5 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

5 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

5 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

6 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

6 hours ago