Featured

ಕುಂದಾಪುರ:ಮೆಹಂದಿ ಕಾರ್ಯಕ್ರಮದಲ್ಲಿ ಮನೆಗೆ ನುಗ್ಗಿ ದಾಂಧಲೆ ನಡೆಸಿ ಲಾಠಿ ಚಾರ್ಜ್‌ ನಡೆಸಿದ ಕೋಟ ಠಾಣೆಯ ಪೊಲೀಸರು – Vishwanews24

ಕುಂದಾಪುರ:ಮೆಹಂದಿ ಕಾರ್ಯಕ್ರಮದಲ್ಲಿ ಮನೆಗೆ ನುಗ್ಗಿ ದಾಂಧಲೆ ನಡೆಸಿ ಲಾಠಿ ಚಾರ್ಜ್‌ ನಡೆಸಿದ ಕೋಟ ಠಾಣೆಯ ಪೊಲೀಸರು – Vishwanews24

ಕುಂದಾಪುರ: ಕೋಟ ತಟ್ಟು ಗ್ರಾಮದ ಕೊರಗ ಸಮುದಾಯದವರ ಮೆಹೆಂದಿ ಮನೆಗೆ ನುಗ್ಗಿ ಕೋಟ ಠಾಣೆಯ ಪೊಲೀಸರು ನುಗ್ಗಿ ದಾಂಧಲೆ ನಡೆಸಿ ಲಾಠಿ ಚಾರ್ಜ್‌ ನಡೆಸಿದ ಆರೋಪವನ್ನು ಎದುರಿಸುತ್ತಿದ್ದಾರೆ.

ಸೋಮವಾರ ಸಂಜೆ ಕೋಟ ತಟ್ಟು ಗ್ರಾಮದಲ್ಲಿ ಕೊರಗ ಸಮುದಾಯದವರೊಬ್ಬರ ಮನೆಯಲ್ಲಿ ಮೆಹಂದಿ ಕಾರ್ಯಕ್ರಮ ನಡೆದಿದ್ದು, ಕಾರ್ಯಕ್ರಮದಲ್ಲಿ ಡಿಜೆ ಹಾಕಿರುವುದನ್ನು ಆಕ್ಷೇಪಿಸಿ ಸ್ಥಳೀಯರು 112 ಗೆ ಕರೆ ಮಾಡಿ ತಿಳಿಸಿದ್ದು ಅದರಂತೆ ಕೋಟ ಪೊಲೀಸರು ಸ್ಥಳಕ್ಕೆ ಹೋಗಿ ಕಾರ್ಯಕ್ರಮದಲ್ಲಿ ಇದ್ದವರಿಗೆ ಮನಬಂದಂತೆ ಥಳೀಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಘಟನೆಯಲ್ಲಿ ಮದುಮಗ ಸೇರಿದಂತೆ ಹಲವರ ಮೇಲೆ ಹಲ್ಲೆಯಾಗಿದ್ದು, ಸಮುದಾಯದ ಮುಖಂಡರನ್ನು ಠಾಣೆಗೆ ಕರೆಯಿಸಿ ಅಂಗಿ ಬಿಚ್ಚಿಸಿ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಘಟನೆಯ ಕುರಿತು ಸಾಮಾಜಿಕ ಜಾಲತಾಣದಲ್ಲಿ ವೀಡಿಯೋಗಳು ವೈರಲ್‌ ಆಗುತ್ತಿದ್ದು ಪೊಲೀಸರ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕೋಟ ತಟ್ಟುವಿನ ಕೊರಗ ಕಾಲೋನಿಯದ ಚಿಟ್ಟು ಬೆಟ್ಟುವಿನಲ್ಲಿ‌ ಮದುವೆಯ ಮುನ್ನ ದಿನವಾದ ಸೋಮವಾರ ರಾತ್ರಿ ಮೆಹೆಂದಿ ಕಾರ್ಯಕ್ರಮ ನಡೆಯುತ್ತಿರುವಾಗ ಪೊಲೀಸರು ಏಕಾಏಕಿ ನುಗ್ಗಿ ಲಾಠಿಚಾರ್ಜ್ ನಡೆಸಿದ ಆರೋಪ ಇದೆ. ದುರ್ಬಲ ಸಮುದಾಯದ ವಿರುದ್ಧದ ಈ ರೀತಿಯ ವರ್ತನೆಯನ್ನು ಸಾಲಿಡಾರಿಟಿ ಯೂತ್’ಮೂವ್ಮೆಂಟ್ ತೀವ್ರವಾಗಿ ಖಂಡಿಸುತ್ತದೆ. ಸಬ್ ಇನ್ಸ್‌ಪೆಕ್ಟರ್ ಮತ್ತು ಸಿಬ್ಬಂದಿಗಳು ಸೇರಿ ಈ ರೀತಿಯ ವರ್ತನೆ ಮಾಡಿರುವ ಕುರಿತು ಆರೋಪ ಕೇಳಿ ಬಂದಿದೆ. ಅದರೊಂದಿಗೆ ಕೊರಗ ಸಮುದಾಯದ ನಾಯಕ ಗಣೇಶ್ ಅವರಿಗೂ ತೀವ್ರವಾಗಿ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದ್ದು ಈ ಕುರಿತು ಕೂಡಲೇ ಸರಕಾರ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಸಾಲಿಡಾರಿಟಿ ಯೂತ್’ಮೂವ್ಮೆಂಟ್ ಆಗ್ರಹಿಸುತ್ತದೆ.

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

17 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

17 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

17 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

18 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

18 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

18 hours ago