ಕುಂದಾಪುರ: ಇಲ್ಲಿನ ಸಂತೆ ಮಾರುಕಟ್ಟೆ ಬಳಿ ಜುಲೈ 14ರ ಮಧ್ಯರಾತ್ರಿ 2.30ರ ಸುಮಾರಿಗೆ ಅಂಗಡಿಯ ಶಟರ್ ಮುರಿದು, 95 ಸಾವಿರ ರೂ. ಮೌಲ್ಯದ ತಾಮ್ರದ ವಯರ್, ಹಿತ್ತಾಳೆಯ ವಸ್ತುಗಳನ್ನು ಕಳ್ಳತನ ಮಾಡಿದ್ದ ನಾಲ್ವರನ್ನು ಉಡುಪಿಯ ಸಂತೆಕಟ್ಟೆಯಲ್ಲಿ ಕುಂದಾಪುರ ಪೊಲೀಸರು ಜುಲೈ 18ರಂದು ಬಂಧಿಸಿದ್ದಾರೆ.
ಮಂಗಳೂರಿನ ಸರ್ಫರಾಜ್ (33), ಜಾಕೀರ್ (36), ಮೊಹಮ್ಮದ್ ಅಲ್ಫಾಜ್ (26) ಹಾಗೂ ಮಂಜನಾಡಿಯ ಮೊಹಮ್ಮದ್ ರಿಯಾಜ್ (44) ಬಂಧಿತ ಆರೋಪಿಗಳು.
ಆರೋಪಿಗಳಿಂದ 50 ಕೆಜಿ ತೂಕದ ತಾಮ್ರದ ಸರಿಗೆ, 34 ಕೆಜಿ ತೂಕದ ತಾಮ್ರದ ಸರಿಗೆ, 64 ಕೆಜಿ ತೂಕದ ಹಿತ್ತಾಳೆಯ ವಸ್ತು, 20 ಕೆಜಿ ತೂಕದ ಅಲ್ಯೂಮಿನಿಯಂ ವಸ್ತು, ಫ್ರಿಡ್ಜ್ ಕಂಪ್ರಸರ್, 45 ಹಳೆಯ ಮೊಬೈಲ್‌ಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.
ಈ ಕಾರ್ಯಾಚರಣೆಯಲ್ಲಿ ಕುಂದಾಪುರ ನಗರ ಠಾಣಾ ಎಸ್‌ಐಗಳಾದ ನಂಜಾ ನಾಯ್ಕ, ಪುಷ್ಪಾ, ಸಂಚಾರ ಎಸ್‌ಐ ನೂತನ್, ಸಿಬ್ಬಂದಿಗಳಾದ ಮೋಹನ್, ಸಂತೋಷ್, ಪ್ರಿನ್ಸ್, ನಾಗೇಶ್, ಮಹಾಬಲ, ರೇವತಿ, ಘನಶ್ಯಾಮ್, ಸತೀಶ್ ಭಾಗವಹಿಸಿದ್ದರು.
ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ ನ್ಯೂಜಿಲೆಂಡ್‌ನ ಮಾಜಿ ನಾಯಕ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ…
ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್ ಉಡುಪಿ: ತಮಿಳುನಾಡಿನ ಮುಖ್ಯಮಂತ್ರಿಯಾದ ಬಳಿಕ…
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಹಿಂದುಳಿದ ವರ್ಗಗಳ ಇಲಾಖೆಯಿಂದ ಅನುದಾನ…
ಧರ್ಮಸ್ಥಳ ವಿಚಾರದಲ್ಲಿ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ : ವಿಜಯೇಂದ್ರ ಆರೋಪ ಬೆಂಗಳೂರು: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಸ್ವಾಮಿಯ…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ವಿಜಯ್ ಕೊಲ್ಲೂರು : ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಇಂದು ಕೊಲ್ಲೂರು ಶ್ರೀ…
ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ ಸನ್ನಿಧಿ ಸ್ಟುಡಿಯೋ ಶ್ರೀಯುತ ಅನೀಶ್ ಕಾಪು ಇವರು ಫೋಟೋಗ್ರಫಿ…