ಉಡುಪಿ : ಕುಂದಾಪುರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 8 ಅಂಗನವಾಡಿ ಕಾರ್ಯಕರ್ತೆ ಹಾಗೂ 35 ಅಂಗನವಾಡಿ ಸಹಾಯಕಿಯರ ಗೌರವಸೇವೆಯ ಹುದ್ದೆಗಳ ನೇಮಕಾತಿಗಾಗಿ ಆಸಕ್ತ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ವೆಬ್‌ಸೈಟ್ https://karnemakaone.kar.nic.in/abcd/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸುವಾಗ ಮೊದಲನೇ ಹಂತದಲ್ಲಿ ಆನ್‌ಲೈನ್‌ನಲ್ಲಿ ನೀಡಲಾದ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ, ಎರಡನೇ ಹಂತದಲ್ಲಿ ಅರ್ಜಿದಾರರ ಸಹಿ ಹಾಗೂ ಭಾವಚಿತ್ರವನ್ನು ಅಪ್‌ಲೋಡ್ ಮಾಡಿ, ನಂತರ ಇ-ಸೈನ್ ಹಂತವನ್ನು ಕಡ್ಡಾಯವಾಗಿ ಪೂರ್ಣಗೊಳಿಸಿ, ಮೂರನೇ ಹಂತದಲ್ಲಿ ಅರ್ಜಿದಾರರು ತಮಗೆ ಸಂಬAಧಿಸಿದ ಎಲ್ಲಾ ದಾಖಲಾತಿಗಳನ್ನು ಅಪ್‌ಲೋಡ್ ಮಾಡಿ, ನಾಲ್ಕನೇ ಹಂತದಲ್ಲಿ ಮೂರನೇ ಹಂತದಲ್ಲಿ ಎಲ್ಲಾ ದಾಖಲಾತಿಗಳನ್ನು ಅಪ್‌ಲೋಡ್ ಮಾಡಿದ ಬಳಿಕ ಅರ್ಜಿ ಮುದ್ರಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಕುಂದಾಪುರ ದೂ.ಸಂಖ್ಯೆ: 08254-230807 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…