Featured

ಕುಂದಾಪುರ: ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗೋದಾಮು ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ ,ಅಪಾರ ಪ್ರಮಾಣದ  ಪಡಿತರ ಅಕ್ಕಿ ವಶಕ್ಕೆ -Vishwanews24

ಕುಂದಾಪುರ: ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗೋದಾಮು ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ ,ಅಪಾರ ಪ್ರಮಾಣದ  ಪಡಿತರ ಅಕ್ಕಿ ವಶಕ್ಕೆ -Vishwanews24

ಕುಂದಾಪುರ: ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗೋದಾಮು ಮೇಲೆ ಆಹಾರ ಇಲಾಖೆ ಅಧಿಕಾರಿಗಳು ಶನಿವಾರ ರಾತ್ರಿ ದಾಳಿ ನಡೆಸಿ, ಅಪಾರ ಪ್ರಮಾಣದ ಅಕ್ಕಿ ವಶಕ್ಕೆ ಪಡೆದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ದಾಳಿ ವೇಳೆ ಮೂವರು ಆರೋಪಿಗಳು ತಪ್ಪಿಸಿಕೊಂಡಿದ್ದಾರೆ.

ಆರೋಪಿಗಳನ್ನು ಕೋಟೆಶ್ವರ ನಿವಾಸಿ ಉದಯ್ ಕುಮಾರ್ ಶೆಟ್ಟಿ, ಮಂಗಳೂರು ನಿವಾಸಿ ಆಜಾಮ್, ಉಡುಪಿ ನಿವಾಸಿ ರಮಾ ಪೂಜಾರಿ ಎಂದು ತಿಳಿದು ಬಂದಿದ್ದು, ಆರೋಪಿಗಳಿಗಾಗಿ ಪೋಲಿಸರು ಬಲೆ ಬೀಸಿದ್ದಾರೆ.

ಕೋಟೆಶ್ವರ ಗ್ರಾಮದ ಹಾಲಾಡಿ ರಸ್ತೆಯಲ್ಲಿರುವ ನಂದಿ ಹೋಟೆಲ್ ನ ಹಿಂಭಾಗದ ಉದಯ್ ಕುಮಾರ್ ಶೆಟ್ಟಿಯವರ ಶೆಡ್ ನಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ ಪಡಿತರ ಅಕ್ಕಿಯನ್ನು ಸಾಗಾಟ ಮಾಡಲು ಯತ್ನಿಸುತ್ತಿದ್ದಾಗ ಕುಂದಾಪುರ ಠಾಣಾಧಿಕಾರಿ ಸದಾಶಿವ ಗವರೋಜಿ ಮತ್ತು ಸಿಬ್ಬಂದಿಗಳು ದಾಳಿ ಮಾಡಿ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ.

ವಿವಿಧ ಸಾಮಾಜಿಕ ಯೋಜನೆಗೆ ವಿತರಣೆಯಾದ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಸಂಗ್ರಹಣೆ ಮಾಹಿತಿ ಆಧರಿಸಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ದಾಳಿ ವೇಳೆ 3,76,800 ರೂ. ಮೌಲ್ಯದ 25,120 ಕೆಜಿ ಪಡಿತರ ಅಕ್ಕಿ, 2 ಲಕ್ಷ ರೂ ಮೌಲ್ಯದ ಅಶೋಕ್ ಲೈಲ್ಯಾಡ್ ಗೂಡ್ಸ್ ವಾಹನ, 4 ಲಕ್ಷ ರೂ ಮೌಲ್ಯದ ಟಾಟಾ ವಾಹನ , 2,000 ರೂ. ಮೌಲ್ಯದ ಹೊಲಿಗೆ ಯಂತ್ರ ಹಾಗೂ 3,000 ರೂ. ಮೌಲ್ಯದ ತೂಕ ಯಂತ್ರವನ್ನು ವಶಕ್ಕೆ ಪಡೆದಿದ್ದಾರೆ.

ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

ಉಡುಪಿ:ಕೊರೊನಾ ಅವಧಿಯಲ್ಲಿ ಸಾವನ್ನಪ್ಪಿದ ಅಂಗನವಾಡಿ ಕೊರೊನಾ ವಾರಿಯರ್ಸ್ ಗೆ ಸರಕಾರ ಇನ್ನೂ ಪರಿಹಾರ ನೀಡಿಲ್ಲ : ಸಂಘದ ರಾಜ್ಯಾಧ್ಯಕ್ಷೆ ಆಕ್ರೋಶ -Vishwanews24

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

19 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago