ಕುಂದಾಪುರ: ಅಪರಿಚಿತನೊಬ್ಬ ಕಾರಿನಲ್ಲಿ ಬಂದು ಚೂರಿ ಇರಿದು ಪರಾರಿಯಾದ ಘಟನೆ ರವಿವಾರ ಸಂಜೆ ಕುಂದಾಪುರದ ಚಿಕನ್ ಸಾಲ್ ರಸ್ತೆಯ ಅಂಚೆ ಕಚೇರಿ ಸಮೀಪ ನಡೆದಿದೆ.
ಚೂರಿ ಇರಿತಕ್ಕೊಳಗಾದವರನ್ನು ಕುಂದಾಪುರ ಮೂಲದ ರಾಘವೇಂದ್ರ (42) ಎಂದು ಗುರುತಿಸಲಾಗಿದ್ದು, ಗಂಭೀರ ಗಾಯಗೊಂಡ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೊಲೀಸ್ ಮೂಲಗಳ ಪ್ರಕಾರ ರಾಘವೇಂದ್ರ ಅವರು ಕಾರಿನಲ್ಲಿ ತೆರಳುತ್ತಿದ್ದ ವೇಳೆ ಇನ್ನೊಂದು ಕಾರಿನಲ್ಲಿ ಬಂದಿದ್ದ ಅಪರಿಚಿತ ವ್ಯಕ್ತಿ ರಾಘವೇಂದ್ರ ಅವರ ಕಾರನ್ನು ಅಡ್ಡಗಟ್ಟಿ ತೊಡೆಗೆ ಚೂರಿ ಇರಿದು, ಕಾರಿನಲ್ಲಿ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.
ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ ಕೆ.ಯು, ವೃತ್ತ ನಿರೀಕ್ಷಕ ನಂದ ಕುಮಾರ್, ಕುಂದಾಪುರ ನಗರ ಠಾಣೆ ಪಿಎಸೈ ವಿನಯ್ ಕೊರ್ಲಹಳ್ಳಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕುಂದಾಪುರ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ
ಉಡುಪಿ: ಪ್ರಮೋದ್ ಮಧ್ವರಾಜ್ ಅವರ ಮಾಜಿ ಆಪ್ತ ಸಹಾಯಕ ಗೋವಾದಲ್ಲಿ ಶವವಾಗಿ ಪತ್ತೆ! ಉಡುಪಿ: ಮಾಜಿ ಸಚಿವ ಮತ್ತು ಬಿಜೆಪಿ…
ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ - ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…