Featured

ಕುಂದಾಪುರ: ಅಪಾರ್ಟ್‌ಮೆಂಟ್ ಮಹಡಿಯಿಂದ ಅಯಾತಪ್ಪಿ ಬಿದ್ದು ಮಹಿಳೆ ಮೃತ್ಯು – Vishwanews24

ಕುಂದಾಪುರ: ಅಪಾರ್ಟ್‌ಮೆಂಟ್ ಮಹಡಿಯಿಂದ ಅಯಾತಪ್ಪಿ ಬಿದ್ದು ಮಹಿಳೆ ಮೃತ್ಯು

ಕುಂದಾಪುರ: ನಗರದ ಮುಖ್ಯ ರಸ್ತೆಯ ಹಳೇ ಗೀತಾಂಜಲಿ ಟಾಕೀಸಿನ ಜಾಗದಲ್ಲಿ ನಿರ್ಮಿಸಲಾಗಿದ್ದ ಫ್ಲ್ಯಾಟಿನ ಮಹಡಿಯಿಂದ ಅಚಾನಕ್ ಆಗಿ ಬಿದ್ದ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮಹಿಳೆಯನ್ನು ಫ್ಲ್ಯಾಟಿನ ನಿವಾಸಿ ಲಕ್ಷ್ಮೀ ಪ್ರತಾಪ್‌ ನಾಯಕ್ ಎಂದು ಗುರುತಿಸಲಾಗಿದೆ.

ಆದಿತ್ಯವಾರ ಸಂಜೆ 7.00 ಗಂಟೆಯ ಸುಮಾರಿಗೆ ಫ್ಲ್ಯಾಟಿನ ಮಹಡಿಯ ಮೇಲೆ ಒಣಗಿಸಲು ಹಾಕಿದ್ದ ತೆಂಗಿನ ಕಾಯಿಯನ್ನು ತರಲು ಹೋಗಿದ್ದು ಅಕಸ್ಮಾತ್ತಾಗಿ ಮಹಡಿಗೆ ಅಳವಡಿಸಲಾಗಿದ್ದ ಫೈಬ‌ರ್ ಶೀಟ್ ಮೇಲೆ ಕಾಲಿಟ್ಟಿದ್ದರಿಂದ ಅದು ತುಂಡಾಗಿ ನೇರ ಲಿಫ್ಟ್ ನ ಮೇಲೆ ಬಿದ್ದರು ಅವರ ತಲೆಗೆ ಹಾಗೂ ಕೈಗಳಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು ಸ್ಥಳದಲ್ಲೇ ಮೃತಪಟ್ಟರು.

ಸುದ್ದಿ ತಿಳಿದ ತಕ್ಷಣ ಆಗಮಿಸಿದ ಕುಂದಾಪುರ ಠಾಣಾ ಪೊಲೀಸರು ಲಿಫ್ಟ್ ಜಾಗದಲ್ಲಿ ಸಿಲುಕಿಕೊಂಡ ಮೃತದೇಹವನ್ನು ಹೊರ ತೆಗೆಯಲು ಹರಸಾಹಸ ಪಟ್ಟರು ಕೊನೆಯಲ್ಲಿ ಸಾರ್ವಜನಿಕರ ಸಹಕಾರದೊಂದಿಗೆ ಲಿಫ್ಟ್ ಗೆ ಅಳವಡಿಸಲಾಗಿದ್ದ ಕಬ್ಬಿಣದ ಸಲಾಕೆಗಳನ್ನು ತುಂಡರಸಿ ಮೃತ ದೇಹವನ್ನು ಹೊರತೆಗೆಯಲಾಯಿತು ಕುಂದಾಪುರದ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮೃತದೇಹವನ್ನು ನಗರದ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ ಮೃತರು ನಗರದ ಆಡಿಟ‌ರ್ ಪ್ರತಾಪ್ ನಾಯಕ್ ರವರ ಪತ್ನಿಯಾಗಿದ್ದು ಇಬ್ಬರು ಪುತ್ರರನ್ನು ಅಗಲಿದ್ದಾರೆ.

Vishwa News 24

Recent Posts

ಅಪಘಾತದಲ್ಲಿ ಮೃತಪಟ್ಟ ಪುತ್ರನ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು – vishwanews24

ಅಪಘಾತದಲ್ಲಿ ಮೃತಪಟ್ಟ ಪುತ್ರನ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು ಹಾಸನ: ಹೊಳೆನರಸೀಪುರದ ಚಾಕೇನಹಳ್ಳಿ ಕಟ್ಟೆ ಗ್ರಾಮದಲ್ಲಿ ಅಪಘಾತದಿಂದ…

12 minutes ago

ಬೆಂಗಳೂರು: ಸಿಲಿಂಡರ್‌ ಸ್ಫೋಟ; ಒಂದೇ ಕುಟುಂಬದ 6 ಜನರಿಗೆ ಗಾಯ, ಇಬ್ಬರು ಗಂಭೀರ – vishwanews24

ಬೆಂಗಳೂರು: ಸಿಲಿಂಡರ್‌ ಸ್ಫೋಟ; ಒಂದೇ ಕುಟುಂಬದ 6 ಜನರಿಗೆ ಗಾಯ, ಇಬ್ಬರು ಗಂಭೀರ ಬೆಂಗಳೂರು: ನಾಯಂಡಹಳ್ಳಿಯ ವಿನಾಯಕ ಲೇಔಟ್‌ನಲ್ಲಿರುವ ಮನೆಯೊಂದರಲ್ಲಿ…

20 minutes ago

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

24 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

2 days ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

2 days ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

2 days ago