ಕುಂದಾಪುರ: ಅಪ್ರಾಪ್ತೆಯನ್ನು ವಿವಾಹವಾದ ಪ್ರಕರಣದಲ್ಲಿ ಯುವತಿಯ ತಂದೆ ಸಂತೋ಼ಷ್ ಶೆಟ್ಟಿ, ಬಾವ ರಾಜೇಶ್ ಶೆಟ್ಟಿ ಹಾಗೂ ಮದುವೆಯಾದ ವ್ಯಕ್ತಿ ತೊಂಭಟ್ಟು ನಿವಾಸಿ ಭರತ್ ಶೆಟ್ಟಿ(37) ಯ ಸಹಿತ ಮೂವರ ವಿರುದ್ಧ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪ್ರಾಪ್ತೆ ಬಾಲಕಿಗೆ 17 ವರ್ಷ 8 ತಿಂಗಳಾಗಿದ್ದು, ವಿವಾಹ ಮಾಡಿಕೊಂಡಿರುವ ಆರೋಪಿ ಭರತ್ ಶೆಟ್ಟಿಗೆ 37 ವರ್ಷವಾಗಿದೆ ಎಂದು ತಿಳಿದುಬಂದಿದೆ. ಬಾಲಕಿಯ ತಂದೆ ಸಂತೋಷ್ ಶೆಟ್ಟಿ ಹಾಗೂ ಬಾವ ರಾಜೇಶ್ ಶೆಟ್ಟಿ ಸೇರಿ ಆರೋಪಿ ಭರತ್ ಶೆಟ್ಟಿಯೊಂದಿಗೆ ವಿವಾಹ ಮಾಡಿರುವುದಾಗಿ ತಿಳಿದುಬಂದಿದೆ.
ಬಾಲಕಿಯ ತಂದೆ ಸಂತೋಷ್ ಶೆಟ್ಟಿ ಹಾಗು ಅಕ್ಕನ ಗಂಡ ರಾಜೇಶ್ ಶೆಟ್ಟಿ ಸೇರಿಕೊಂಡು ಆರೋಪಿ ಭರತ್ ಶೆಟ್ಟಿಯ ಜೊತೆ ಹಾಲಾಡಿ ಗ್ರಾಮದ ಲಕ್ಷ್ಮೀ ನರಸಿಂಹ ದೇವಸ್ಥಾನದಲ್ಲಿ ಮೇ 21ರಂದು ರಾತ್ರಿ 8 ಗಂಟೆಗೆ ವಿವಾಹ ಮಾಡಿಸಿದ್ದಾರೆನ್ನಲಾಗಿದೆ. ಆದರೆ ಮದುವೆಗೆ ತಾಯಿ ಒಪ್ಪಿಗೆ ಇಲ್ಲದ್ದರಿಂದ ಮದುವೆಯ ಬಳಿಕ ಮಗಳನ್ನು ಮನೆಗೆ ಸೇರಿಸಿಕೊಳ್ಳದ ಕಾರಣ, ಆರೋಪಿ ಭರತ್ ಶೆಟ್ಟಿ ಆಕೆಯನ್ನು ತೊಂಬಟ್ಟಿನ ತನ್ನ ಮನೆಗೆ ಕರೆದೊಯ್ದಿದ್ದ.
ಬಾಲ್ಯ ವಿವಾಹ ನಡೆದಿರುವ ಬಗ್ಗೆ ಕುಂದಾಪುರದ ಸಹಾಯಕ ಶಿಶು ಅಭಿವೃದ್ದಿ ಇಲಾಖೆಯ ಯೋಜನಾಧಿಕಾರಿ ರೂಪಾ ಬಂಗೇರ ಅವರಿಗೆ ದೂರು ಬಂದಿದ್ದು, ಅದರಂತೆ ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಬಳಿಕ ರೂಪಾ ಬಂಗೇರ ನೀಡಿದ ದೂರಿನಂತೆ ಶಂಕರನಾರಾಯಣ ಠಾಣೆಯಲ್ಲಿ ಫೊಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…