Featured

ಕುಂದಾಪುರ: ಅಪ್ರಾಪ್ತೆಯ ವಿವಾಹ ಪ್ರಕರಣ: ಬಾಲಕಿಯ ತಂದೆ, ಬಾವ, ವರನ ವಿರುದ್ಧ ಪ್ರಕರಣ ದಾಖಲು – vishwanews24

ಕುಂದಾಪುರ: ಅಪ್ರಾಪ್ತೆಯ ವಿವಾಹ ಪ್ರಕರಣ: ಬಾಲಕಿಯ ತಂದೆ, ಬಾವ, ವರನ ವಿರುದ್ಧ ಪ್ರಕರಣ ದಾಖಲು

ಕುಂದಾಪುರ: ಅಪ್ರಾಪ್ತೆಯನ್ನು ವಿವಾಹವಾದ ಪ್ರಕರಣದಲ್ಲಿ ಯುವತಿಯ ತಂದೆ ಸಂತೋ಼ಷ್ ಶೆಟ್ಟಿ, ಬಾವ ರಾಜೇಶ್ ಶೆಟ್ಟಿ ಹಾಗೂ ಮದುವೆಯಾದ ವ್ಯಕ್ತಿ ತೊಂಭಟ್ಟು ನಿವಾಸಿ ಭರತ್ ಶೆಟ್ಟಿ(37) ಯ ಸಹಿತ ಮೂವರ ವಿರುದ್ಧ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪ್ರಾಪ್ತೆ ಬಾಲಕಿಗೆ 17 ವರ್ಷ 8 ತಿಂಗಳಾಗಿದ್ದು, ವಿವಾಹ ಮಾಡಿಕೊಂಡಿರುವ ಆರೋಪಿ ಭರತ್ ಶೆಟ್ಟಿಗೆ 37 ವರ್ಷವಾಗಿದೆ ಎಂದು ತಿಳಿದುಬಂದಿದೆ. ಬಾಲಕಿಯ ತಂದೆ ಸಂತೋಷ್ ಶೆಟ್ಟಿ ಹಾಗೂ ಬಾವ ರಾಜೇಶ್ ಶೆಟ್ಟಿ ಸೇರಿ ಆರೋಪಿ ಭರತ್ ಶೆಟ್ಟಿಯೊಂದಿಗೆ ವಿವಾಹ ಮಾಡಿರುವುದಾಗಿ ತಿಳಿದುಬಂದಿದೆ.

ಬಾಲಕಿಯ ತಂದೆ ಸಂತೋಷ್ ಶೆಟ್ಟಿ ಹಾಗು ಅಕ್ಕನ ಗಂಡ ರಾಜೇಶ್ ಶೆಟ್ಟಿ ಸೇರಿಕೊಂಡು ಆರೋಪಿ ಭರತ್ ಶೆಟ್ಟಿಯ ಜೊತೆ ಹಾಲಾಡಿ ಗ್ರಾಮದ ಲಕ್ಷ್ಮೀ ನರಸಿಂಹ ದೇವಸ್ಥಾನದಲ್ಲಿ ಮೇ 21ರಂದು ರಾತ್ರಿ 8 ಗಂಟೆಗೆ ವಿವಾಹ ಮಾಡಿಸಿದ್ದಾರೆನ್ನಲಾಗಿದೆ. ಆದರೆ ಮದುವೆಗೆ ತಾಯಿ ಒಪ್ಪಿಗೆ ಇಲ್ಲದ್ದರಿಂದ ಮದುವೆಯ ಬಳಿಕ ಮಗಳನ್ನು ಮನೆಗೆ ಸೇರಿಸಿಕೊಳ್ಳದ ಕಾರಣ, ಆರೋಪಿ ಭರತ್ ಶೆಟ್ಟಿ ಆಕೆಯನ್ನು ತೊಂಬಟ್ಟಿನ ತನ್ನ‌ ಮನೆಗೆ ಕರೆದೊಯ್ದಿದ್ದ.

ಬಾಲ್ಯ ವಿವಾಹ ನಡೆದಿರುವ ಬಗ್ಗೆ ಕುಂದಾಪುರದ ಸಹಾಯಕ ಶಿಶು ಅಭಿವೃದ್ದಿ ಇಲಾಖೆಯ ಯೋಜನಾಧಿಕಾರಿ ರೂಪಾ ಬಂಗೇರ ಅವರಿಗೆ‌ ದೂರು ಬಂದಿದ್ದು, ಅದರಂತೆ ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಬಳಿಕ ರೂಪಾ ಬಂಗೇರ ನೀಡಿದ ದೂರಿನಂತೆ ಶಂಕರನಾರಾಯಣ ಠಾಣೆಯಲ್ಲಿ ಫೊಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

9 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

9 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

9 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

9 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

10 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

10 hours ago