Featured

ಕುಂದಾಪುರ: ಅಪ್ರಾಪ್ತ ಬಾಲಕರಿಗೆ ಲೈಂಗಿಕ ದೌರ್ಜನ್ಯ ; ಆರೋಪಿ ಚಂದ್ರ ಕೆ. ಹೆಮ್ಮಾಡಿಗೆ 10 ವರ್ಷ ಜೈಲು ಶಿಕ್ಷೆ – Vishwanews24

ಕುಂದಾಪುರ: ಅಪ್ರಾಪ್ತ ಬಾಲಕರಿಗೆ ಲೈಂಗಿಕ ದೌರ್ಜನ್ಯ ; ಆರೋಪಿ ಚಂದ್ರ ಕೆ. ಹೆಮ್ಮಾಡಿಗೆ 10 ವರ್ಷ ಜೈಲು ಶಿಕ್ಷೆ

ಕುಂದಾಪುರ: ಅಪ್ರಾಪ್ತ ಬಾಲಕರಿಗೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿಯಲ್ಲಿ ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಎರಡು‌ ಪ್ರತ್ಯೇಕ ಪ್ರಕರಣದಲ್ಲಿ ಆರೋಪಿ ಚಂದ್ರ ಕೆ. ಹೆಮ್ಮಾಡಿ ದೋಷಿಯೆಂದು ಉಡುಪಿ ಪೋಕ್ಸೋ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ಒಂದನೇ ಪ್ರಕರಣದಲ್ಲಿ ಸಂತ್ರಸ್ತ 15 ವರ್ಷದ ಬಾಲಕನನ್ನು ಶಾಲೆಯಲ್ಲಿ ಹಾಡುಗಾರನೆಬಂತೆ ಪರಿಚಯಿಸಿಕೊಂಡ ಆರೋಪಿ ಬಾಲಕ‌ ಶಾಲಾ ಆಟದ ಮೈದಾನದಲ್ಲಿರುವಾಗ ಬೈಕ್ ಸವಾರಿ ಮಾಡಿಸುವ ನೆಪದಲ್ಲಿ ಆತನನ್ನು ಶೌಚಾಲಯದೊಳಕ್ಕೆ ಕರೆಯಿಸಿ‌ ಲೈಂಗಿಕ ದೌರ್ಜನ್ಯವೆಸಗಿದ್ದ. 23 ಸಾಕ್ಷ್ಯಾಧಾರಗಳ ಪೈಕಿ 15 ಸಾಕ್ಷಿಗಳ ವಿಚಾರಣೆ ನಡೆಸಿದ್ದು ನೊಂದ ಬಾಲಕ ನುಡಿದ ಸಾಕ್ಷಿ ಹಾಗೂ ಸಾಂದರ್ಭಿಕ ಸಾಕ್ಷಿಗಳ ಆಧಾರದಲ್ಲಿ ಚಂದ್ರ ಕೆ. ಹೆಮ್ಮಾಡಿ ಅಪರಾಧಿಯೆಂದು ತೀರ್ಪು ನೀಡಿದ ನ್ಯಾಯಾಲಯ‌ 10 ವರ್ಷ ಕಠಿಣ ಸಜೆ ಹಾಗೂ ನೊಂದ ಬಾಲಕನಿಗೆ 25 ಸಾವಿರ ದಂಡ ನೀಡಲು ಆದೇಶಿಸಿದೆ.

ಮತ್ತೊಂದು‌ ಪ್ರಕರಣವೂ ಗಂಗೊಳ್ಳಿ ಠಾಣಾ‌ ವ್ಯಾಪ್ತಿಯಲ್ಲಿ ನಡೆದಿದ್ದು ಚಂದ್ರ ಕೆ. ಹೆಮ್ಮಾಡಿ 13 ವರ್ಷದ ಸಂತ್ರಸ್ತ ಬಾಲಕನನ್ನು ಪರಿಚಯಿಸಿಕೊಂಡು ಗುಹೆ ಫೋಟೋ ತೆಗೆಯಲು ಹೋಗುವುದಿದೆ ಎಂದು ಸ್ನೇಹಿತನೊಂದಿಗೆ ಬೈಕಿನಲ್ಲಿ ಕರೆದೊಯ್ದು ಸ್ನೇಹಿತನಿಗೆ ಆಟವಾಡಲು‌ ಮೊಬೈಲ್ ನೀಡಿ ಬಾಲಕನನ್ನು ಗುಹೆಯೊಳಗೆ ಕರೆದೊಯ್ದು ಇಚ್ಚೆಗೆ ವಿರುದ್ಧವಾಗಿ ಲೈಂಗಿಕ ಕಿರುಕುಳ ನೀಡಿದ್ದ ಎನ್ನುವ ಆರೋಪದಡಿ ಪ್ರಕರಣ ದಾಖಲಾಗಿತ್ತು. 22 ಸಾಕ್ಷಿದಾರರ ಪೈಕಿ 14 ಸಾಕ್ಷಿಗಳ ವಿಚಾರಣೆ ನಡೆಸಲಾಗಿತ್ತು. ನೊಂದ ಬಾಲಕನ ಸಾಕ್ಷಿ ಹಾಗೂ ಸಾಂದರ್ಭಿಕ ಸಾಕ್ಷಿಗಳು ಅಭಿಯೋಜನೆಗೆ ಪೂರಕವಾಗಿದ್ದು ಅಪರಾಧಿಗೆ 5 ವರ್ಷ ಕಠಿಣ ಸಜೆ ವಿಧಿಸಿದ್ದು ಹಾಗೂ ನೊಂದ ಬಾಲಕನಿಗೆ 25 ಸಾವಿರ ಪರಿಹಾರ ನೀಡಲು ನ್ಯಾಯಾಲಯ ಆದೇಶಿಸಿದೆ.

ಈ ಎರಡು‌ ಪ್ರತ್ಯೇಕ ಪ್ರಕರಣದ ದೋಷಾರೋಪಣೆ ಪಟ್ಟಿಯನ್ನು ಅಂದಿನ ಬೈಂದೂರು ಸಿಪಿಐ ಪರಮೇಶ್ವರ ಆರ್. ಗುನಗ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಎರ್ಮಾಳ್ ಕಲ್ಪನಾ ಅವರು ತೀರ್ಪು ನೀಡಿದ್ದು ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ ರಾಘವೇಂದ್ರ ಅವರು ಪ್ರಾಸಿಕ್ಯೂಶನ್ ಪರ ವಾದ ಮಂಡಿಸಿದ್ದರು.

ಇನ್ನು ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಒಟ್ಟು 21 ಪ್ರಕರಣ ದಾಖಲಾಗಿತ್ತು. ಅವುಗಳ ಪೈಕಿ ಈ‌ ಹಿಂದೆ ಒಂದು‌ ಪ್ರಕರಣದಲ್ಲಿ ಶಿಕ್ಷೆ ವಿಧಿಸಲಾಗಿದ್ದು ಇದು ಶಿಕ್ಷೆಗೊಳಪಟ್ಟ ಮೂರನೇ ಪ್ರಕರಣವಾಗಿದೆ. ಇನ್ನು 18 ಪ್ರಕರಣಗಳು ವಿಚಾರಣೆಗೆ ಬಾಕಿಯಿದೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

10 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

11 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

12 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

12 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

12 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

12 hours ago