ಕುಂದಾಪುರ: ಕಡಲಿಗಿಳಿದ ಯುವಕನೋರ್ವ ಸಮುದ್ರದ ಅಲೆಗಳ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋದ ದುರ್ಘಟನೆ ತಾಲೂಕಿನ ಬೀಜಾಡಿಯ ಅರಬ್ಬೀ ಸಮುದ್ರದಲ್ಲಿ ಬುಧವಾರ ಸಂಜೆ ಸಂಭವಿಸಿದೆ.
ನೀರು ಪಾಲಾಗಿರುವ ಯುವಕನನ್ನು ತಿಪಟೂರಿನ ನಿವಾಸಿ ಯೋಗೀಶ್ (23) ಎಂದು ಗುರುತಿಸಲಾಗಿದೆ.
ಬುಧವಾರ ಸಂಜೆ ಸ್ನೇಹಿತ ಸಂದೀಪ್ ಎನ್ನುವವರ ಜೊತೆಯಲ್ಲಿ ಬೀಜಾಡಿ ಗ್ರಾಮದ ದಾರಸ್ ಮನೆ ಸಮೀಪದ ಸಮುದ್ರದ ಕಿನಾರೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಕಡಲಿಗೆ ಇಳಿದಿದ್ದಾರೆ. ಈ ವೇಳೆ ರಕ್ಕಸ ಅಲೆಗಳು ಅಪ್ಪಳಿಸಿದ ಪರಿಣಾಮ ಆಯ ತಪ್ಪಿದ್ದಾರೆ. ಸಮುದ್ರದ ಅಲೆಗಳಿಗೆ ಸಿಲುಕಿ ಕೊಚ್ಚಿ ಹೋಗುತ್ತಿದ್ದ ಗೆಳೆಯನ ರಕ್ಷಣೆಗೆ ಪ್ರಯತ್ನಿಸಿದರೂ, ಅವರ ಪ್ರಯತ್ನಗಳು ಯಶಸ್ವಿಯಾಗಲಿಲ್ಲ. ಅಲೆಗಳ ಆರ್ಭಟ ಜೋರಾಗಿಯೇ ಇದ್ದುದ್ದರಿಂದ ಏನೂ ಮಾಡಲು ಸಾಧ್ಯವಾಗದೇ ಬೊಬ್ಬೆ ಹಾಕಿದ್ದಾರೆ. ಸಂದೀಪ್ ಅವರ ಬೊಬ್ಬೆ ಕೇಳಿ ಬಂದ ಸ್ಥಳೀಯರು ಅವರನ್ನು ರಕ್ಷಣೆ ಮಾಡಿ ಬಳಿಕ ಯೋಗೀಶ್ ರಕ್ಷಣೆಗೆ ಮುಂದಾದರೂ ಯಾವುದೇ ಪ್ರಯೋಜನವಾಗಿಲ್ಲ.
ಬೀಜಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀಜಾಡಿ ಮನೆಯ ವಿನಯ್ ಎನ್ನುವವರ ಮನೆಯಲ್ಲಿ ನಡೆಯಬೇಕಾಗಿದ್ದ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಯೋಗೀಶ್ ಆಗಮಿಸಿದ್ದರು ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಮತ್ತು ಕರಾವಳಿ ಕಾವಲು ಪಡೆಯ ಸಿಬ್ಬಂದಿಗಳು ಭೇಟಿ ನೀಡಿದ್ದು ನಾಪತ್ತೆಯಾದ ಯುವಕನಿಗಾಗಿ ಕಾರ್ಯಾಚರಣೆ ಮುಂದುವರೆಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…