Featured

ಕುಂದಾಪುರ: ಈ ಬಾರಿ ಜನ ನನ್ನನ್ನು ಗೆಲ್ಲಿಸುತ್ತಾರೆ ಎನ್ನುವ ನಂಬಿಕೆಯಿದೆ :  ಗೀತಾ ಶಿವರಾಜ್‌ ಕುಮಾರ್‌ – Vishwanews24

ಕುಂದಾಪುರ: ಈ ಬಾರಿ ಜನ ನನ್ನನ್ನು ಗೆಲ್ಲಿಸುತ್ತಾರೆ ಎನ್ನುವ ನಂಬಿಕೆಯಿದೆ :  ಗೀತಾ ಶಿವರಾಜ್‌ ಕುಮಾರ್‌

ಕುಂದಾಪುರ‍: ರಾಜ್ಯದ ಮಾಜೀ ಮುಖ್ಯಮಂತ್ರಿಗಳಾಗಿದ್ದ ಎಸ್. ಬಂಗಾರಪ್ಪನವರು ಜನಪರ ಕಾಳಜಿಯಿಂದ ಹೆಸರು ಪಡೆದವರು. ರಾಜಕೀಯವನ್ನು ಯಾವತ್ತೂ ಸ್ವಾರ್ಥಕ್ಕೆ ಬಳಸಿಕೊಳ್ಳದ ಬಂಗಾರಪ್ಪ ಜನಪರ ಕೊಡುಗೆಗಳನ್ನು ರಾಜ್ಯದ ಜನತೆಗೆ ನೀಡಿದವರು. ಉಚಿತ ಕೃಷಿ ಪಂಪ್ ಸೆಟ್ ಗಳ ಮೂಲಕ ರಾಜ್ಯದ ರೈತರ ಕಣ್ಣೊರೆಸಿದವರು. ಜನಾಶೀರ್ವಾದ ನನಗೆ ದೊರಕಿದರೆ ಅಪ್ಪನ ಹಾದಿಯಲ್ಲೇ ನಡೆಯುವೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಹೇಳಿದರು.

ಅವರು ಗುರುವಾರ ನೆಂಪುವಿನಲ್ಲಿ ಮಾಜೀ ಶಾಸಕ ಬಿ.ಎಂ.ಸುಕುಮಾರ ಶೆಟ್ಟರ ನಿವಾಸದಲ್ಲಿ ಕರೆಯಲಾದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ನನಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರ ಹೊಸತಲ್ಲ. ಈ ಹಿಂದೆಯೂ ನಾನು ಲೋಕಸಭೆಗೆ ಇದೇ ಕ್ಷೇತ್ರದಿಂದ ಸ್ಪರ್ಧಿಸಿದ್ದೆ. ನಾನು ಅಧಿಕಾರ ಇಲ್ಲದೇ ಇದ್ದರೂ ಸಾಕಷ್ಟು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವುದರಿಂದ ಈ ಬಾರಿ ಜನ ನನ್ನನ್ನು ಗೆಲ್ಲಿಸುತ್ತಾರೆ ಎನ್ನುವ ನಂಬಿಕೆಯಿದೆ. ಜನರ ನಂಬಿಕೆಯನ್ನು ನಾನು ಉಳಿಸಿಕೊಳ್ಳುವೆ ಎಂದರು.

ನಟ ಶಿವರಾಜ್ ಕುಮಾರ್ ಮಾತನಾಡಿ, ಈ ಬಾರಿಯ ಚುನಾವಣೆಯಲ್ಲಿ ಶೇ 80 ರಷ್ಟು ತೊಡಗಿಸಿಕೊಳ್ಳುತ್ತೇನೆ. ಮತದಾರರು ಗೀತಾ ಕೈ ಹಿಡಿದರೆ ಬಂಗಾರಪ್ಪನವರ ರಾಜಕೀಯ ಪಾರದರ್ಶಕತೆ ಮತ್ತೆ ವಿಜೃಂಭಿಸಲಿದೆ ಎಂದರು. ಸಚಿವ ಮಧು ಬಂಗಾರಪ್ಪ ಕೂಡಾ ಉತ್ತಮ ರಾಜಕಾರಣಿಯಾಗಿದ್ದು ಜನಸ್ನೇಹಿಯಾಗಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯ ಉತ್ತಮ ನಾಯಕರನ್ನು ಹೊಂದಲು ಈ ಚುನಾವಣೆ ಮಹತ್ತರ ಪಾತ್ರ ವಹಿಸುತ್ತದೆ ಎಂದು ಭಾವಿಸುತ್ತೇನೆ ಎಂದರು.

ಬೈಂದೂರು ಮಾಜೀ ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಮಾಜೀ ಶಾಸಕ ಕೆ. ಗೋಪಾಲ ಪೂಜಾರಿ, ಬೇಳೂರು ಶಾಸಕ ಗೋಪಾಲಕೃಷ್ಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜಿ.ಎ.ಬಾವಾ, ಕೆಪಿಸಿಸಿ ಸದಸ್ಯ ಪ್ರಕಾಶ್ ಶೆಟ್ಟಿ, ಕೆಪಿಸಿಸಿ ವಕ್ತಾರ ಅನಿಲ್, ಸಂಜೀವ ಶೆಟ್ಟಿ ಸಂಪಿಗೇಡಿ, ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago