ಉಡುಪಿ

ಕುಂದಾಪುರ : ಉದಯ್ ಗಾಣಿಗ ಕೊಲೆ ಪ್ರಕರಣ : ಯಾರೇ ಆಗಿರಲಿ ಆರೋಪಿಗಳ ರಕ್ಷಣೆಗೆ ನಿಂತರೆ ಸಹಿಸಲ್ಲ : ಮಾಜಿ ಸಚಿವ ಸೊರಕೆ – Vishwanews24

ಕುಂದಾಪುರ : ಉದಯ್ ಗಾಣಿಗ ಕೊಲೆ ಪ್ರಕರಣ : ಯಾರೇ ಆಗಿರಲಿ ಆರೋಪಿಗಳ ರಕ್ಷಣೆಗೆ ನಿಂತರೆ ಸಹಿಸಲ್ಲ : ಮಾಜಿ ಸಚಿವ ಸೊರಕೆ – Vishwanews24

ಕುಂದಾಪುರ: ಸಾಮಾಜಿಕ ಕಾರ್ಯಕರ್ತ ಯಡಮೊಗೆ ಉದಯ್ ಗಾಣಿಗ ಕೊಲೆ ಆರೋಪಿಗಳಿಗೆ ಕೆಲ ಬಿಜೆಪಿ ಮುಖಂಡರು ರಕ್ಷಣೆ ಕೊಡುತ್ತಿದ್ದಾರೆ ಎನ್ನುವ ಆರೋಪಗಳು ಕೇಳಿಬರುತ್ತಿದ್ದು, ಅದು ಯಾರೇ ಆಗಿರಲಿ, ಆರೋಪಿಗಳ ರಕ್ಷಣೆಗೆ ನಿಂತರೆ ನಾವು ಸಹಿಸುವುದಿಲ್ಲ. ಮುಂಬರುವ ಅಧಿವೇಶನದಲ್ಲಿ ನಮ್ಮ ಪಕ್ಷದ ಶಾಸಕರು ನ್ಯಾಯಕ್ಕಾಗಿ ಈ ಬಗ್ಗೆ ಧ್ವನಿ ಎತ್ತುತ್ತಾರೆ ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಎಚ್ಚರಿಕೆ ನೀಡಿದ್ದಾರೆ.

ಅವರು ಶುಕ್ರವಾರ ಸಂಜೆ ದುಷ್ಕರ್ಮಿಗಳಿಂದ ಹತ್ಯೆಯಾದ ಮೃತ ಯಡಮೊಗೆಯ ಉದಯ್ ಗಾಣಿಗ ಅವರ ಮನೆಗೆ ಮಾಜಿ ಶಾಸಕ ಗೋಪಾಲ ಪೂಜಾರಿಯವರೊಂದಿಗೆ ತೆರಳಿ ಉದಯ್ ಪತ್ನಿ ಹಾಗೂ ಮನೆಯವರಿಗೆ ಸಾಂತ್ವಾನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಗ್ರಾಮೀಣ ಪ್ರದೇಶದಲ್ಲಿ ಇಂತಹದೊಂದು ದುಷ್ಕೃತ್ಯ ನಡೆಯುತ್ತದೆ ಎಂದು ಊಹಿಸಲು ಸಾಧ್ಯವಿಲ್ಲ. ಪ್ರಕರಣ ತನಿಖಾ ಹಂತದಲ್ಲಿದ್ದು, ಈಗಾಗಲೇ ಕೆಲವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಕೊಲೆ ಪ್ರಕರಣದಲ್ಲಿ ಭಾಗಿಯಾಗ ಇನ್ನೂ ಹಲವರನ್ನು ಬಂಧಿಸಿಲ್ಲ ಎನ್ನುವ ಭಾವನೆಗಳು ಸ್ಥಳೀಯರಲ್ಲಿ ಮನೆಮಾಡಿದೆ. ಇದನ್ನು ನಾವು ಇಲಾಖಾ ಮಟ್ಟದಲ್ಲಿ ಒತ್ತಡವನ್ನು ತರುತ್ತೇವೆ. ಸೋಮವಾರ ಜಿಲ್ಲಾ ಕಾಂಗ್ರೆಸ್ ನಿಯೋಗ ಎಸ್‌ಪಿ ಯವರನ್ನು ಭೇಟಿ ಮಾಡಿ ತನಿಖೆ ಎಲ್ಲಿಯ ತನಕ ಹೋಗಿದೆ ಎಂಬ ವಿಚಾರಗಳನ್ನು ತಿಳಿದುಕೊಳ್ಳುತ್ತೇವೆ. ಕೊಲೆ ಪ್ರಕರಣದಲ್ಲಿ ಇನ್ನೂ ಕೆಲವರು ಭಾಗಿಯಾಗಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ. ಇದನ್ನು ಎಸ್‌ಪಿ ಯವರ ಗಮನಕ್ಕೆ ತರುತ್ತೇವೆ. ನಾವು ಎಸ್‌ಪಿ, ಡಿವೈಎಸ್‌ಪಿ ಹಾಗೂ ತನಿಖಾಧಿಕಾರಿಯ ಮೇಲೆ ವಿಶ್ವಾಸವಿಟ್ಟುಕೊಳ್ಳುತ್ತೇವೆ. ಇದೊಂದು ಪೂರ್ವನಿಯೋಜಿತ ಕೃತ್ಯ ಎನ್ನುವುವುದು ಈಗಾಗಲೇ ಜಗಜ್ಜಾಹೀರಾಗಿದೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಹೀಗಾದರೆ ಮಾತ್ರ ನಾವು ಮೃತ ಉದಯ್ ಗಾಣಿಗ ಅವರ ಮನೆಗೆ ನ್ಯಾಯ ಒದಗಿಸಿದಂತಾಗುತ್ತದೆ. ಒಂದು ವೇಳೆ ಇದರಲ್ಲಿ ರಾಜಕೀಯ ಹಸ್ತಾಕ್ಷೇಪವಾಗಿ ಆರೋಪಿಗಳನ್ನು ರಕ್ಷಣೆಗೆ ಮುಂದಾದರೆ ನಾವು ಮುಂದಿನ ದಿನಗಳಲ್ಲಿ ಇದೇ ಗ್ರಾಮದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ. ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗಲೂ ಈ ರೀತಿಯ ಘಟನೆಗಳು ನಡೆದಾಗ ಪರಿಹಾರ ಘೋಷಿಸಿದ್ದೇವೆ. ಸರ್ಕಾರ ಮೃತ ಉದಯ್ ಕುಟುಂಬಕ್ಕೆ ಪರಿಹಾರ ಕೊಡಬೇಕು ಎಂದು ಆಗ್ರಹಿಸಿದರು.

ಕೊಕ್ಕರ್ಣೆಯ ಪ್ರವೀಣ್ ಪೂಜಾರಿ, ಕೋಟ ಅವಳಿ ಪ್ರಕರಣದಲ್ಲಿ ಬಿಜೆಪಿ ಮುಖಂಡರೇ ಭಾಗಿಯಾಗಿದ್ದರು. ಆ ವೇಳೆಯಲ್ಲಿ ಬಿಜೆಪಿ ನಾಯಕರು ಏನೂ ಮಾತನಾಡದೆ ಮೌನವಹಿಸಿದ್ದರು. ಓರ್ವ ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಗ್ರಾಮವನ್ನು ಮುನ್ನಡೆಸಬೇಕಿದ್ದ ಪಂಚಾಯತ್ ಪ್ರಥಮ ಪ್ರಜೆ ಕೊಲೆ ಮಾಡುವಂತಹ ದುಷ್ಕೃತ್ಯಕ್ಕೆ ಮುಂದಾದರೆ ಇಂತವರಿ0ದ ಇನ್ನೇನು ನಿರೀಕ್ಷಿಸಲು ಸಾಧ್ಯ. ಬಿಜೆಪಿಯ ಜಿಲ್ಲಾಧ್ಯಕ್ಷ ಕೊಲೆಯಲ್ಲಿ ಭಾಗಿಯಾದ ಆರೋಪಿಯನ್ನು ತಮ್ಮ ಫ್ಲಾö್ಯಟ್‌ನಲ್ಲಿ ಇರಿಸಿಕೊಳ್ಳುತ್ತಾರೆಂದರೆ ಇವರಿಗೆ ಏನನ್ನಬೇಕೊ ತಿಳಿಯುತ್ತಿಲ್ಲ. ಉದಯ್ ಗಾಣಿಗ ಕುಟುಂಬಕ್ಕೆ ನ್ಯಾಯ ಕೊಡಿಸಬೇಕಾದುದ್ದು ಸಂಸದ ಹಾಗೂ ಶಾಸಕರ ಕರ್ತವ್ಯ. ಮಾನವೀಯತೆಯ ನೆಲೆಯಲ್ಲಾದರೂ ಸಂಸದರು ಬಂದು ಕುಟುಂಬಕ್ಕೆ ಸಾಂತ್ವಾನ ಹೇಳಬೇಕಿತ್ತು. ಆದರೆ ಆ ಕೆಲಸ ಮಾಡದಿರುವುದು ದುರದೃಷ್ಟಕರ ಎಂದರು.­

ಕೆಪಿಸಿಸಿ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಈ ಪ್ರಕರಣದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಜಿಲ್ಲೆಯ ಉಸ್ತುವಾರಿಯಾದ ಮಾಜಿ ಸಂಸದ ಧ್ರುವನಾರಾಯಣ್ ಕೂಡ ಈ ಪ್ರಕರಣದ ಕುರಿತು ಫಾಲೋಅಪ್ ನಡೆಸುತ್ತಿದ್ದಾರೆ. ವಿರೋಧ ಪಕ್ಷದ ನಾಯಕರ ಗಮನಕ್ಕೂ ತರುವೆವು. ಮುಂದಿನ ಅಧಿವೇಶನದಲ್ಲಿ ವಿಧಾನಸಭೆ ಹಾಗೂ ವಿಧಾನಪರಿಷತ್‌ನಲ್ಲೂ ಈ ಬಗ್ಗೆ ಧ್ವನಿ ಎತ್ತುವ ಕೆಲಸವನ್ನು ಮಾಡುತ್ತೇವೆ ಎಂದು ವಿನಯ್ ಕುಮಾರ್ ಸೊರಕೆ ಹೇಳಿದರು.

ಮಾಜಿ ಶಾಸಕರ ಗೋಪಾಲ ಪೂಜಾರಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕೊಡವೂರು, ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಶೆಟ್ಟಿ ಗುಡಿಬೆಟ್ಟು, ಮುಖಂಡರಾದ ರಮೇಶ್ ಗಾಣಿಗ, ಸಂಜೀವ ಸಂಪಿಗೇಡಿ, ಯುವ ಮುಖಂಡರಾದ ಶೇಖರ್ ಪೂಜಾರಿ, ಪ್ರಶಾಂತ್ ಪೂಜಾರಿ ಕರ್ಕಿ, ದಿನೇಶ್ ನಾಯ್ಕ್ ಹಳ್ಳಿಹೊಳೆ ಮೊದಲಾದವರು ಇದ್ದರು.

Vishwa News 24

Recent Posts

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

26 minutes ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

39 minutes ago

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago