Featured

ಕುಂದಾಪುರ: ಉದಯ ಗಾಣಿಗ ಕೊಲೆ ಪ್ರಕರಣ ; ಆರೋಪಿ ಬಾಲಚಂದ್ರ ಭಟ್ ಜಾಮೀನು ಮತ್ತೆ ತಿರಸ್ಕೃತ – Vishwanews24

ಕುಂದಾಪುರ: ಉದಯ ಗಾಣಿಗ ಕೊಲೆ ಪ್ರಕರಣ ; ಆರೋಪಿ ಬಾಲಚಂದ್ರ ಭಟ್ ಜಾಮೀನು ಮತ್ತೆ ತಿರಸ್ಕೃತ – Vishwanews24

ಕುಂದಾಪುರ: ಸಾಮಾಜಿಕ ಕಾರ್ಯಕರ್ತ ಯಡಮೊಗೆ ಉದಯ ಗಾಣಿಗ ಕೊಲೆ ಪ್ರಕರಣದ ಆರೋಪಿಗಳಲ್ಲಿ ಓರ್ವರಾಗಿರುವ ಬಿಜೆಪಿ ಮುಖಂಡ ಬಾಲಚಂದ್ರ ಭಟ್ ಎಂಬಾತನ ಜಾಮೀನು ಅರ್ಜಿ ಎರಡನೇ ಬಾರಿಗೆ ಕುಂದಾಪುರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾಗೊಳಿಸಿ ಆದೇಶ ನೀಡಿದೆ.

ಈ ಹಿಂದೆ ಬಾಲಚಂದ್ರ ಭಟ್ ಜು.23 ರಂದು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದನ್ನು ನ್ಯಾಯಾಲಯ ತಿರಸ್ಕೃರಿಸಿತ್ತು. ಈಗ ಮತ್ತೆ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದ ಬಳಿಕ ಬಾಲಚಂದ್ರ ಭತ್ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಬಳಿಕ ಮತ್ತೊಂದು ಬಾರಿ ಸಲ್ಲಿಸಿರುವ ಅರ್ಜಿಯನ್ನು ಕೂಡ ನ್ಯಾಯಾಧೀಶ ರವೀಂದ್ರ ಎಂ.ಜೋಷಿ ತಿರಸ್ಕರಿಸಿ ಆದೇಶ ನೀಡಿದ್ದಾರೆ.

ಪ್ರಾಸಿಕ್ಯೂಶನ್ ಪರ ಜಿಲ್ಲಾ ಸರಕಾರಿ ಅಭಿಯೋಜಕ ಬೇಳೂರು ಪ್ರಕಾಶ್ಚಂದ್ರ ಶೆಟ್ಟಿ ವಾದಿಸಿದ್ದರು. ಜೂ.5ರಂದು ರಾತ್ರಿ ವೇಳೆ ಯಡಮೊಗೆ ಗ್ರಾಪಂ ಅಧ್ಯಕ್ಷ ಪ್ರಾಣೇಶ್ ಯಡಿಯಾಳ್ ಹಾಗೂ ಆತನ ತಂಡ ಉದಯ್ ಗಾಣಿಗ ಅವರ ಮೈಮೇಲೆ ಕಾರು ಹತ್ತಿಸಿ ಆ ಬಳಿಕ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿರುವ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯುಕೆ ಮಾರ್ಗಸೂಚಿ ಬದಲಾವಣೆ : ಅ.11ರಿಂದ ಲಸಿಕೆ ಪಡೆದ ಭಾರತೀಯರಿಗಿಲ್ಲ ಕ್ವಾರಂಟೈನ್ – Vishwanews24

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

23 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago