ಕುಂದಾಪುರ: ಉದ್ಯಮಿ ಕಟ್ಟೆ ಭೋಜಣ (79) ಆತ್ಮಹತ್ಯೆ ಪ್ರಕರಣದಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಬಂಧಿತನಾದ ಮೊಳಹಳ್ಳಿ ಗಣೇಶ್ ಶೆಟ್ಟಿ ಜಾಮೀನಿಗಾಗಿ ಸಲ್ಲಿಸಿದ ಅರ್ಜಿಯನ್ನು ಕುಂದಾಪುರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕರಿಸಿದೆ.
ಇದು ಬಹುಕೋಟಿ ವ್ಯವಹಾರಕ್ಕೆ ಸಂಬಂಧಿಸಿದ ಪ್ರಕರಣವಾಗಿದ್ದು, ಕಟ್ಟೆ, ಭೋಜಣ್ಣ ಅವರು ಆರೋಪಿ ಗಣೇಶ್ ಶೆಟ್ಟಿ ಮನೆಯಲ್ಲಿಯೇ ಪಿಸ್ತೂಲಿನಿಂದ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾತ್ರವಲ್ಲ, ಪೊಲೀಸ್ ಠಾಣೆಯ ಎಸ್.ಎಚ್.ಒ. ಅವರನ್ನು ಪ್ರಸ್ತಾಪಿಸಿ ಡೆತ್‌ನೋಟ್ ಬರೆದಿರುವುದರಿಂದ ಆರೋಪಿಗೆ ಜಾಮೀನು ನೀಡಬಾರದು ಎನ್ನುವುದಾಗಿ ಸರಕಾರಿ ಅಭಿಯೋಜಕ ಬೇಳೂರು ಪುಕಾಶ್ಚಂದ್ರ ಶೆಟ್ಟಿ ವಾದ ಮಂಡಿಸಿದ್ದಾರೆ.
ಎಂದು ತಿಳಿದುಬಂದಿದೆ.
ಪ್ರಾಸಿಕ್ಯೂಶನ್ ಮಂಡಿಸಿದ ವಾದವನ್ನು ಪುರಸ್ಕರಿಸಿದ ಕುಂದಾಪುರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾ, ಅಬ್ದುಲ್ ರಹೀಮ್ ಹುಸೇನ್ ಶೇಖ್ ಅವರು ಆರೋಪಿ ಸಲ್ಲಿಸಿದ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದಾರೆ. ಕಟ್ಟಿ ಭೋಜಣ್ಣ ಅವರು ಮೇ 26 ರಂದು ಬೆಳಗ್ಗೆ ಮೊಳಹಳ್ಳಿ ಗಣೇಶ್ ಶೆಟ್ಟಿ ಅವರ ಮನೆಯ ಸಿಟೌಟ್‌ನಲ್ಲಿ ತನ್ನದೇ ಪಿಸ್ತೂಲಿನಿಂದ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…