ಕುಂದಾಪುರ : ಉದ್ಯಮಿ, ಸಹನಾ ಸಮೂಹ ಸಂಸ್ಥೆಗಳ ಮಾಲೀಕ ಸುರೇಂದ್ರ ಶೆಟ್ಟಿ ಕಾರಿಗೆ ಅಡ್ಡಗಟ್ಟಿ ಮಾರಕಾಯುಧಗಳಿಂದ ಹಲ್ಲೆ ನಡೆಸಿ ಕೊಲೆಯತ್ನ ನಡೆಸಿದ ಘಟನೆಗೆ ಸಂಬಂಧಿಸಿ ಆರೋಪಿಯೊರ್ವನನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿ ಎಸ್‌ಎಸ್ಎಸ್ ಟ್ರಾವೆಲ್ಸ್ ಎಂಬ ಸಂಸ್ಥೆಯ ಮಾಲೀಕ ಸತೀಶ್ ಶೆಟ್ಟಿ (53)ಹಾಗೂ ಆತನ ಪುತ್ರ ಸನ್ನಿಧಿ ಶೆಟ್ಟಿ (24) ತಲೆಮರೆಸಿಕೊಂಡಿದ್ದಾನೆ.
ಉದ್ಯಮಿ ಸುರೇಂದ್ರ ಶೆಟ್ಟಿ ಪತ್ನಿ ಸಹನಾ ಸುರೇಂದ್ರ ಶೆಟ್ಟಿಯವರು ಕುಂದಾಪುರ ನಗರದ ಎ.ಎಸ್ ಟ್ರೇಡರ್ ಎಂಬ ಪ್ಲ್ಯಾಟ್ ನಲ್ಲಿ ಮಳೆ ನೀರಿಗೆ ಸಂಬಂಧಿಸಿದ ಕೆಲಸ ಮಾಡುತ್ತಿದ್ದರು. ಇದೇ ಸಂದರ್ಭ ಮೊದಲ ಮಹಡಿಯಲ್ಲಿದ್ದ ಆರೋಪಿ ಸತೀಶ ಶೆಟ್ಟಿ ಆಕ್ಷೇಪ ವ್ಯಕ್ತಪಡಿಸಿದ್ದಲ್ಲದೆ, ಸುರೇಂದ್ರ ಶೆಟ್ಟಿಗೆ ಕರೆ ಮಾಡಿ ಅವಾಚ್ಯವಾಗಿ ಬೈದಿದ್ದ ಎನ್ನಲಾಗಿದೆ. ಬಳಿಕ ಜುಲೈ 7 ರಂದು ಬೆಳಿಗ್ಗೆ ಕುಂದಾಪುರದ ಕೆ.ಎಸ್.ಆರ್.ಟಿ.ಸಿ ಡಿಪ್ಪೋ ಎದುರಿನ ಸರ್ವೀಸ್ ರಸ್ತೆಯಲ್ಲಿ ಸುರೇಂದ್ರ ಶೆಟ್ಟಿಯವರ ಕಾರಿಗೆ ಆರೋಪಿಗಳು ಇನ್ನೋವಾ ಕಾರನ್ನು ಅಡ್ಡ ನಿಲ್ಲಿಸಿ ಕಬ್ಬಿಣದ ರಾಡ್ ಮೂಲಕ ಹಲ್ಲೆ ನಡೆಸಲು ಯತ್ನಿಸಿದ್ದು, ಕಾರಿನ ಗ್ಲಾಸ್ ಹಾಗೂ ಕಾರಿನ ಡೋರ್ ಅನ್ನು ಜಖಂ ಮಾಡಿ, ಪೋಲೀಸರಿಗೆ ದೂರು ನೀಡಿದ್ದಲ್ಲಿ ಕೊಲ್ಲುವುದಾಗಿ ಜೀವಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.
ಉದ್ಯಮಿ ಸುರೇಂದ್ರ ಶೆಟ್ಟಿ ಕುಂದಾಪುರ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಆರೋಪಿ ಸತೀಶ್ ಶೆಟ್ಟಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯ ಸತೀಶ್ ಶೆಟ್ಟಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಆತನ ಪುತ್ರ ಸನ್ನಿಧಿ ಶೆಟ್ಟಿ ಪತ್ತೆಗೆ ಪೊಲೀಸರು ಬಲೆಬೀಸಿದ್ದಾರೆ
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…