ಕುಂದಾಪುರ: ಕೇವಲ 43 ದಿನದ ಹಸುಗೂಸು ತಾಯಿ ಎದೆ ಹಾಲು ಕುಡಿದು ಕೆಲವೇ ಹೊತ್ತಿನಲ್ಲಿ ಸಾವನ್ನಪ್ಪಿದ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಗುಜ್ಜಾಡಿ ಗ್ರಾಮದ ಲಕ್ಷ್ಮಣ ಎಂಬುವರ ಪುತ್ರಿ ನೇತ್ರಾವತಿ ಎಂಬುವರ ಮಗುವೇ ಸಾವನ್ನಪ್ಪಿದ ಮಗು. ಮಂಗಳವಾರ ಬೆಳಿಗ್ಗೆ ಎಂಟು ಗಂಟೆಯ ಸುಮಾರಿಗೆ ತಾಯಿ ಎದೆಹಾಲು ಕುಡಿಸಿ ರೂಮಿನಿಂದ ಹೊರಗೆ ಬಂದಾಗ ಅಜ್ಜ ಲಕ್ಷ್ಮಣ ಮಗುವನ್ನು ನೋಡಲು ಒಳಗೆ ಹೋಗಿದ್ದಾರೆ. ಆಗ ಮಗು ಉಸಿರಾಡುತ್ತಿಲ್ಲ ಎನ್ನುವ ಅನುಮಾನ ಬಂದಿದೆ.
ತಕ್ಷಣ ಮಗುವನ್ನು ಮುಟ್ಟಿದಾಗಲೂ ಯಾವುದೇ ಪ್ರತಿಕ್ರಿಯೆ ಇಲ್ಲದೇ ಇದ್ದು ಮಗುವಿನ ಮೈ ತಣ್ಣಗಾಗಿದ್ದು ನಂತರ ಮಗುವನ್ನು ಕರೆದುಕೊಂಡು ಕುಂದಾಪುರದ ವಿನಯ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಮಗು ಮೃತಪಟ್ಟಿದೆ ಎಂದು ವೈದ್ಯರು ದೃಢಪಡಿಸಿದ್ದಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…