Featured

ಕುಂದಾಪುರ : ಕಳಪೆ ಕಾಮಗಾರಿಯಿಂದಾಗಿ ಮಿನಿ ವಿಧಾನಸೌಧ ಕಟ್ಟಡದ ಕಚೇರಿಯಲ್ಲಿ ಮೇಲಿನ ಛಾವಣಿ ಕುಸಿತ -Vishwanews24

ಕುಂದಾಪುರ: ಉದ್ಘಾಟನೆಗೊಂಡು ನಾಲ್ಕೇ ವರ್ಷದಲ್ಲಿ ಕಟ್ಟಡದ ಛಾವಣಿ ಕುಸಿದ ಪರಿಣಾಮ ಕಚೇರಿಯಲ್ಲಿದ್ದ ಒಬ್ಬ ಗಾಯಗೊಂಡು ಉಳಿದವರು ಪವಾಡ ಸದೃಶ ಪಾರಾದ ಘಟನೆ ಕುಂದಾಪುರದ ಮಿನಿ ವಿಧಾನಸೌಧದಲ್ಲಿ ಶನಿವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ನಡೆದಿದೆ.

ಛಾವಣಿ ಕುಸಿತದಿಂದ ಗಾಯಗೊಂಡವರನ್ನು ವಾರಾಹಿ ಪಾಜೆಕ್ಟ್‌ನ ನಿವೃತ್ತ ಉದ್ಯೋಗಿ ನಾರಾಯಣ ಬಿಲ್ಲವ ಎಂದು ಗುರುತಿಸಲಾಗಿದೆ.

ಶನಿವಾರ ಬೆಳಿಗ್ಗೆ ಹನ್ನೊಂದು ಗಂಟೆ ಸುಮಾರಿಗೆ ಮಿನಿ ವಿಧಾನಸೌಧದ ಮೇಲಂತಸ್ತಿನಲ್ಲಿರುವ ಕುಂದಾಪುರ ಉಪವಿಭಾಗಾಧಿಕಾರಿಯವರ ಸಿಬ್ಬಂದಿಗಳ ಕಚೇರಿಯಲ್ಲಿ ಮೇಲಿನಿಂದ ಛಾವಣಿ ಕುಸಿದು ಬಿದ್ದಿದೆ. ಈ ಸಂದರ್ಭ ಸ್ಥಳದಲ್ಲಿದ್ದ ನಾರಾಯಣ ಬಿಲ್ಲವ ಎಂಬುವರ ಮೇಲೆ ಛಾವಣಿ ಕುಸಿದು ಬಿದ್ದಿದೆ. ಪರಿಣಾಮವಾಗಿ ನಾರಾಯಣ ಬಿಲ್ಲವರ ತಲೆ ಹಾಗೂ ಕೈ ಕಾಲುಗಳಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ನಿರ್ಮಾಣಕ್ಕೆ ಮೊದಲೇ ಬಿರುಕು ಕಾಣಿಸಿಕೊಂಡಿದ್ದ ಕುಂದಾಪುರದ ಮಿನಿ ವಿಧಾನ ಸೌಧ ಉದ್ಘಾಟನೆಗೆ ಮುನ್ನವೇ ತೇಪೆ ಹಚ್ಚಿಕೊಂಡಿದ್ದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ 2015 ರ ಫೆಬ್ರುವರಿ 7 ರಂದು ಉದ್ಘಾಟನೆಗೊಂಡಿತ್ತು.

ಮಿನಿವಿಧಾನಸೌಧ ಉದ್ಘಾಟನೆಗೂ ಮುನ್ನವೇ ಪತ್ರಿಕೆ ಹಾಗೂ ಮಾಧ್ಯಮಗಳು ಕಟ್ಟಡದ ಕಳಪೆ ಕಾಮಗಾರಿ ಬಗ್ಗೆ ಬೆಳಕು ಚೆಲ್ಲಿದ್ದವು. ಸಾರ್ವಜನಿಕರೂ ಕಾಮಗಾರಿ ಬಗ್ಗೆ ಅಧಿಕಾರಿಗಳಿಗೆ ಪರಿಶೀಲಿಸುವಂತೆ ಮನವಿ ಮಾಡಿದ್ದರು.

ಆದರೆ ಅಧಿಕಾರಿಗಳು ಮಾತ್ರ ನಿರ್ಲಕ್ಷ್ಯ ವಹಿಸಿದ್ದರು. ಪರಿಣಾಮವಾಗಿ ಉದ್ಘಾಟನೆಗೊಂಡು ಒಂದೇ ವರ್ಷದಲ್ಲಿ ಮಿನಿವಿಧಾನಸವಧದ ಕಟ್ಟಡ ಸಂಪೂರ್ಣ ಬಿರುಕು ಬಿಟ್ಟಿತ್ತು. ಎರಡನೆ ಮಳೆಗಾಲದಲ್ಲಿ ಕಟ್ಟಡದಲ್ಲಿ ಸೋರಿಕೆ ಕಂಡು ಬಂದಿತ್ತು. ಇದೀಗ ನಾಲ್ಕೇ ವರ್ಷದಲ್ಲಿ ಛಾವಣಿ ಕುಸಿದಿರುವುದು ಆತಂಕ್ಕೆಡೆಮಾಡಿಕೊಟ್ಟಿದ್ದು, ಹಲವು ಇಲಾಖೆಗಳು ಈ ಕಟ್ಟಡದಲ್ಲಿ ಕೆಲಸ ನಿರ್ವಹಿಸುತ್ತಿವೆ.

 

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

21 hours ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

1 day ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

1 day ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

1 day ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

2 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

2 days ago