ಕುಂದಾಪುರ: 2023 ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗ್ಯಾರಂಟಿ ಕಾರ್ಡ್ ಹಂಚುವ ಮುಖೇನ ಜನರನ್ನು ವಂಚಿಸುತ್ತಿದೆ. ಡಿಸಿ, ತಹಶೀಲ್ದಾರ್, ಮುಖ್ಯ ಮಂತ್ರಿಗಳ ಸಹಿಯನ್ನು ಹೊಂದಿರದ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಅನ್ನು ಮಕ್ಕಳಿಗೆ ಆಟವಾಡಲು ನೀಡಿ ಎಂದು ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹೇಳಿದರು.
ಕುಂದಾಪುರ ಕ್ಷೇತ್ರದ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ ಪರವಾಗಿ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಕಾಂಗ್ರೆಸ್ ಪಕ್ಷ ಆಡಳಿತವಿರುವ ರಾಜ್ಯಗಳಲ್ಲಿ ಕಾಂಗ್ರೆಸ್ ನೀಡಿದ ಗ್ಯಾರಂಟಿ ಕಾರ್ಡಿನ ಆಶ್ವಾಸನೆಗಳನ್ನು ಈಡೇರಿಕೆ ಮಾಡಲು ಸೋತ್ತಿದೆ.ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡಿಗೆ ಬೆಲೆ ಇಲ್ಲ,ಚುನಾವಣೆ ಸಂದರ್ಭದಲ್ಲಿ ಪ್ರಣಾಳಿಕೆ ಹಂಚಿರುವುದನ್ನು ನೋಡಿದ್ದೇನೆ ಗ್ಯಾರಂಟಿ ಕಾರ್ಡ್ ನೀಡುತ್ತಿರುವುದು ಇದೆ ಮೊದಲು ಎಂದರು. ಈ ಸಂದರ್ಭದಲ್ಲಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ,ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…