ಕುಂದಾಪುರ : ಕಾರು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ಲಾರಿ ನಿಲ್ಲಿಸಿ ಟಯರ್ ಪರಿಶೀಲಿಸುತ್ತಿದ್ದ ಚಾಲಕ ಮೃತಪಟ್ಟ ಘಟನೆ ಕೋಟೇಶ್ವರದ ಅಂಕದಕಟ್ಟೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ ರಾತ್ರಿ ನಡೆದಿದೆ.
ಮೃತ ಲಾರಿ ಚಾಲಕನನ್ನು ಲಾಡಸಾಬ್ ನದಾಫ್ ಎಂದು ಗುರುತಿಸಲಾಗಿದೆ. ಉಡುಪಿ ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಲಾರಿಯ ಟಯರ್ ಪಂಚರ್ ಆಗಿದ್ದು, ಲಾರಿಯನ್ನು ರಸ್ತೆ ಬದಿ ನಿಲ್ಲಿಸಿದ ಚಾಲಕ ನದಾಪ್ ಟಯರ್ ಚೆಕ್ ಮಾಡುತ್ತಿದ್ದರು. ಈ ವೇಳೆ ಕೋಟೇಶ್ವರ ಕಡೆಯಿಂದ ಕುಂದಾಪುರ ಕಡೆಗೆ ಅತೀ ವೇಗದಿಂದ ಬಂದ ಕಾರು ನದಾಫ್ ಗೆ ಹಿಂದಿನಿಂದ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಅಪಘಾತದ ರಭಸಕ್ಕೆ ರಸ್ತೆಗೆ ಬಿದ್ದು ತಲೆಗೆ ತೀವ್ರ ಸ್ವರೂಪದ ಗಾಯಗೊಂಡ ನದಾಫ್ ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟರು ಎಂದು ತಿಳಿದುಬಂದಿದೆ.
ಕಾರು ಚಾಲಕ ನಿಲ್ಲಿಸದೇ ಪರಾರಿಯಾಗಿದ್ದು, ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…